ಬಸರಕೋಡ ಯೋಧ ಸಾವು

Mbl-30-Yodha
Published on

ಮುದ್ದೇಬಿಹಾಳ: ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ವಿದ್ಯುತ್ ಅವಘಡದಿಂದಾಗಿ ತಾಲೂಕಿನ ಬಸರಕೋಡ ಗ್ರಾಮದ ಯೋಧ ಮೃತಪಟ್ಟಿದ್ದಾರೆ.

ಶಿವಾನಂದ ಜಗನ್ನಾಥ ಬಡಿಗೇರ(31) ಸಾವಿಗೀಡಾದವರು.14 ವರ್ಷಗಳ ಹಿಂದೆ ಸೇನೆ ಸೇರಿದ್ದರು. ಮೊದಲು ಬಾಂಗ್ಲಾ ದೇಶದ ಗಡಿಯಲ್ಲಿ ನಂತರ ಚೀನಾ ಗಡಿಯಲ್ಲಿ ಸೇವೆ ಸಲ್ಲಿಸಿ ಜಮ್ಮು ಕಾಶ್ಮೀರದ ಗಡಿಯಲ್ಲಿ ನಿಯೋಜನೆಗೊಂಡಿದ್ದರು. ಶಿವಾನಂದ ಕಳೆದ ಒಂದೂವರೆ ವರ್ಷದ ಹಿಂದಷ್ಟೇ ತಾಳಿಕೋಟೆ ತಾಲೂಕಿನ ತುಂಬಗಿಯ ಪುಷ್ಪಾ ಎಂಬುವರೊಂದಿಗೆ ವಿವಾಹವಾಗಿದ್ದರು.

ಕರ್ತವ್ಯ ನಿರತರಾಗಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಾವನ್ನಪ್ಪಿದ್ದಾರೆಂದು ಸೇನೆಯಿಂದ ಕುಟುಂಬದವರಿಗೆ ದೂರವಾಣಿ ಮೂಲಕ ಮಾಹಿತಿ ಬಂದಿದೆ. ಮಗನ ಸಾವಿನ ಸುದ್ದಿ ಕೇಳಿದ ತಕ್ಷಣ ತಂದೆ-ತಾಯಿ ಪ್ರಜ್ಞಾಹೀನರಾಗಿದ್ದಾರೆ. ಈ ಕುರಿತು ಶಿವಾನಂದ ಅವರ ಸಹೋದರ ಕಾಳಪ್ಪ ಬಡಿಗೇರ ಮಾಧ್ಯಮಗಳಿಗೆ ಯೊಧನ ಸಾವಿನ ಕುರಿತು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net