ಮತಪೆಟ್ಟಿಗೆ ಹೊತ್ತು ತರುತ್ತಿದ್ದ ಬಸ್ ಅಪಘಾತ; 10ಕ್ಕೂ ಹೆಚ್ಚು ಅಧಿಕಾರಿಗಳಿಗೆ ಗಂಭೀರ ಗಾಯ

ele
Published on

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮ ಪಂಚಾಯತಿ ಚುನಾವಣೆಯನ್ನು ಮುಗಿಸಿ ಮತ ಪೆಟ್ಟಿಗೆಗಳನ್ನು ಹೊತ್ತು ತರುತ್ತಿದ್ದ ಬಸ್ಸಿಗೆ ಅಪಘಾತವಾಗಿದ್ದು, 10ಕ್ಕೂ ಹೆಚ್ಚು ಚುನಾವಣಾಧಿಕಾರಿಗಳು ಮತ್ತು ಪೊಲೀಸರಿಗೆ ಗಂಭೀರ ಗಾಯವಾಗಿದೆ.

ತಾಲ್ಲೂಕಿನ ಹಡಲಗೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಚುನಾವಣೆ ಬಸ್ ಹಾಗೂ ಟಿಪ್ಪರ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ. ಮುದ್ದೇಬಿಹಾಳ ತಾಲೂಕಿನ ಹುಲ್ಲೂರು, ಕೊಪ್ಪ ತಾಂಡಾ, ಕೊಪ್ಪ, ಸಿದ್ದಾಪುರ ಗ್ರಾಮದ ಮತಗಟ್ಟೆಯ ಡಬ್ಬಿಯನ್ನು ಬಸ್ಸು ಹೊತ್ತು ತರುತ್ತಿತ್ತು.

ಅಪಘಾತದಲ್ಲಿ ಗಾಯಾಳುಗಳಾಗಿರುವ ಅಧಿಕಾರಿಗಳನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ತಹಶೀಲ್ದಾರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net