

ಶಿವಮೊಗ್ಗ: ನಗರದ ಕ್ರಿಯೆಟೀವ್ ಗ್ರೂಪ್‌ನಿಂದ ಪ್ರಥಮ ಬಾರಿಗೆ ಮುದ್ದು ಕೃಷ್ಣ-ಮುದ್ದು ರಾಧೆ ಶಿವಮೊಗ್ಗ-2023 ಮಕ್ಕಳ ವೇಷಭೂಷಣ ಸ್ಪರ್ಧೆ ಸೆಪ್ಟೆಂಬರ್ 10ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ನಗರದ ಪ್ರೆಸ್‌ಟ್ರಸ್ಟ್‌ನಲ್ಲಿ ನಡೆಯಲಿದೆ ಎಂದು ಕ್ರಿಯೇಟಿವ್ ಗ್ರೂಪ್‌ನ ಅಧ್ಯಕ್ಷ ಪರಮೇಶ್ವರ್ ತಿಳಿಸಿದರು.
ಕ್ರಿಯೆಟೀವ್ ಗ್ರೂಪ್ ಕಳೆದ 10 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ವಿಶೇಷ ಮತ್ತು ವಿಶಿಷ್ಟ ಕಾರ್ಯಕ್ರಮದಲ್ಲಿ 1ರಿಂದ 8 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(998650 6166)ಯನ್ನು ಸಂಪರ್ಕಿಸಬಹುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ವಿದುಷಿ ಶ್ವೇತಾ ಪ್ರಕಾಶ್ ಮಾತನಾಡಿ, ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಸಲಾಗುವುದು. 1ರಿಂದ 3, 3ರಿಂದ 6 ಹಾಗೂ 6ರಿಂದ 8 ವರ್ಷದ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳನ್ನು ಮಾಡಲಾಗಿದೆ ಎಂದರು. ಮಹೇಂದ್ರ, ಪೂರ್ಣಿಮಾ ಸುದ್ದಿಗೋಷ್ಠಿಯಲ್ಲಿದ್ದರು.