

ರಾಣೆಬೆನ್ನೂರ: ತಾಲೂಕಿನ ಮುದೇನೂರ&ನಾಗೇನಹಳ್ಳಿ ಮಾರ್ಗದಲ್ಲಿ ಸಮರ್ಪಕವಾಗಿ ಬಸ್ ಸಂಚರಿಸಲು ಸೂಚಿಸಬೇಕು ಎಂದು ಒತ್ತಾಯಿಸಿ ಕೆಎಸ್ಆರ್ಟಿಸಿ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಕುಂಬಾರ ಅವರಿಗೆ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮಂಗಳವಾರ ಮನವಿ ಸಲ್ಲಿಸಿದರು.
ಅಂಗವಿಕಲರಿಗೆ ಕಾಯ್ದಿರಿಸಿದ ಆಸನಗಳಲ್ಲಿ ಬೇರೆ ಬೇರೆ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದಾರೆ. ಇದರಿಂದ ಅಂಗವಿಕಲರು ನಿಂತುಕೊಂಡು ಪ್ರಯಾಣ ಮಾಡುವ ದುಸ್ಥಿತಿ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಅಂಗವಿಕಲರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಪ್ರಮುಖರಾದ ಶಿವಕುಮಾರ ಹಿರೇಮಠ, ಉಮೇಶ ನಾಯಕ, ಗಣೇಶ ನಂದಿಗಾವಿ, ಭೀಮೇಶ ಎಚ್. ಮತ್ತಿತರರು ಉಪಸ್ಥಿತರಿದ್ದರು.