ವಿಗ್​, ಒಳಉಡುಪಿನಲ್ಲಿ 8 ಕೋಟಿ ಮೌಲ್ಯದ ಡ್ರಗ್ಸ್​ ಸಾಗಾಟ; ವಿದೇಶಿ ಮಹಿಳೆ ವಶಕ್ಕೆ

Drugs
Published on

ಮುಂಬೈ: ಅತಿ ದೊಡ್ಡ ಮಾದಕ ವಸ್ತು ಕಳ್ಳಸಾಗಣೆ ಪ್ರಕರಣವೊಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದ್ದು, ಉಗಾಂಡ ಮೂಲದ ಮಹಿಳೆಯೊಬ್ಬರು ತಮ್ಮ ವಿಗ್​ ಹಾಗೂ ಒಳಉಡುಪಿನಲ್ಲಿ 8 ಕೋಟಿ ಮೌಲ್ಯದ ಡ್ರಗ್ಸ್​ ಕಳ್ಳಸಾಗಾಣೆ ಮಾಡಿ ಸಿಕ್ಕಿಬಿದ್ದಿದ್ದಾರೆ.

ಡಿಸೆಂಬರ್​ 19ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಡಿಆರ್​ಐ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 890 ಗ್ರಾಂ ಕೊಕೇನ್ಅನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 8.9 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ. NDPS ಕಾಯ್ದೆ 1985ರ ಅಡಿಯಲ್ಲಿ ಮಹಿಳೆಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ವಿದೇಶದಿಂದ ಅಕ್ರಮವಾಗಿ ಡ್ರಗ್ಸ್​​ ಕಳ್ಳಸಾಗಾಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಹಿಳೆಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಆಕೆಯ ವಿಗ್​ ಹಾಗೂ ಒಳಉಡುಪಿನಲ್ಲಿ ಡ್ರಗ್ಸ್​​ ಸಾಗಿಸುತ್ತಿರುವುದು ಕಂಡು ಬಂದಿದೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅದರ ಒಟ್ಟು ಮೌಲ್ಯ 8.9 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ.

NDPS ಕಾಯ್ದೆ 1985ರ ಅಡಿಯಲ್ಲಿ ಆಕೆಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಚಾರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net