ನಿರ್ಮಾಪಕಿ ಏಕ್ತಾ ಕಪೂರ್ & ಆಕೆಯ ತಾಯಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು; ಕಾರಣ ಹೀಗಿದೆ | Ekta Kapoor

Untitled-design-93
Published on

ಮುಂಬೈ: ನಿರ್ಮಾಪಕಿ ಏಕ್ತಾ ಕಪೂರ್(Ekta Kapoor) ಹಾಗೂ ಆಕೆಯ ತಾಯಿ ಶೋಭಾ ಕಪೂರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣವು ಫೆಬ್ರವರಿ ಮತ್ತು ಏಪ್ರಿಲ್ 2021ರ ನಡುವೆ ಒಟಿಟಿ ಪ್ಲಾಟ್‌ಫಾರ್ಮ್​ನಲ್ಲಿ ಪ್ರಸಾರವಾದ 'ಗಾಂಡಿ ಬಾತ್ ಸೀಸನ್ 6' ವೆಬ್ ಸರಣಿಗೆ ಸಂಬಂಧಿಸಿದೆ. ಇದರಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಆಕ್ಷೇಪಾರ್ಹ ದೃಶ್ಯಗಳಿವೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಇಬ್ಬರೂ ಈಗ ಕಾನೂನು ಸಮಸ್ಯೆಗೆ ಸಿಲುಕಿದ್ದಾರೆ.

ಏಕ್ತಾ ಕಪೂರ್ ಮತ್ತು ಆಕೆಯ ತಾಯಿ ಶೋಭಾ ಕಪೂರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ. ಐಪಿಸಿಯ ಸೆಕ್ಷನ್ 295-ಎ, ಐಟಿ ಕಾಯ್ದೆಯ ಸೆಕ್ಷನ್ 13 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಶಿಕ್ಷಕ ಸ್ವಪ್ನಿಲ್ ರೇವಾಜಿ 2021ರಲ್ಲಿ MHB ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರುದಾರರು ಬೊರಿವಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಸಾರವಾದ ಸರಣಿಯಲ್ಲಿ ಅಪ್ರಾಪ್ತ ಬಾಲಕಿಯ ಅಶ್ಲೀಲ ದೃಶ್ಯಗಳನ್ನು ತೋರಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ. ಈ ವಿವಾದಾತ್ಮಕ ಎಪಿಸೋಡ್ ಪ್ರಸ್ತುತ ಸ್ಟ್ರೀಮಿಂಗ್ ಆಗುತ್ತಿಲ್ಲ ಎಂದು ತಿಳಿಸಿದ್ದಾರೆ.

ದೂರುದಾರರ ಪ್ರಕಾರ, ಅಪ್ರಾಪ್ತ ಬಾಲಕಿ ಬಳಸಿಕೊಂಡು ಅಶ್ಲೀಲ ಚಲನಚಿತ್ರಗಳನ್ನು ನಿರ್ಮಿಸಿರುವುದು ಮತ್ತು ಅಶ್ಲೀಲ ಸಂಭಾಷಣೆಗಳನ್ನು ತೋರಿಸಲಾಗಿದೆ. ವೆಬ್ ಸೀರಿಸ್​​ ನಲ್ಲಿ ಶಾಲಾ ಸಮವಸ್ತ್ರ ಧರಿಸಿರುವ ಪಾತ್ರಧಾರಿಗಳು ಸಹ ಅಶ್ಲೀಲ ಕೃತ್ಯಗಳನ್ನು ಮಾಡುತ್ತಿರುವುದನ್ನು ತೋರಿಸಲಾಗಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸಂಪೂರ್ಣ ವಿಷಯದ ಬಗ್ಗೆ ಏಕ್ತಾ ಕಪೂರ್ ಮತ್ತು ಶೋಭಾ ಕಪೂರ್ ಯಾವುದೇ ಹೇಳಿಕೆ ನೀಡಿಲ್ಲ. 2024 ಸೆಪ್ಟೆಂಬರ್ 27 ರಂದು ಸುಪ್ರೀಂಕೋರ್ಟ್‌ನಲ್ಲಿ ಪ್ರಮುಖ ತೀರ್ಪು ಬಂದಿರುವುದರಿಂದ ಈ ಕ್ರಮ ನಡೆದಿದೆ. ಮಕ್ಕಳಿಗೆ ಸಂಬಂಧಿಸಿದ ಅಸಭ್ಯ ವಿಷಯದ ಬಗ್ಗೆ ನ್ಯಾಯಾಲಯ ತನ್ನ ತೀರ್ಪು ನೀಡಿದ್ದು, ಮಕ್ಕಳೊಂದಿಗೆ ಅಂತಹ ವಿಷಯವನ್ನು ರಚಿಸುವುದು, ನೋಡುವುದು ಮತ್ತು ಡೌನ್‌ಲೋಡ್ ಮಾಡುವುದು ಅಪರಾಧ ಎಂದು ಹೇಳಿದೆ.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net