ಇಂಡಿಗೋ ವಿಮಾನದಲ್ಲಿ ರಕ್ತ ವಾಂತಿ ಮಾಡಿಕೊಂಡ ಪ್ರಯಾಣಿಕ, ವಿಮಾನ ತುರ್ತು ಭೂಸ್ಪರ್ಶ

ff0
Published on

ಇಂಡಿಗೋ ವಿಮಾನಯಾನ ಸಂಸ್ಥೆಯ ಮುಂಬೈ-ರಾಂಚಿ ವಿಮಾನವು ಪ್ರಯಾಣಿಕರೊಬ್ಬರ ವೈದ್ಯಕೀಯ ತುರ್ತು ಪರಿಸ್ಥಿತಿ ಇಂದಾಗಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು.

ಪ್ರಯಾಣಿಕರೊಬ್ಬರು ವಿಮಾನದಲ್ಲಿ ರಕ್ತ ವಾಂತಿ ಮಾಡಿಕೊಂಡಿದ್ದರು, ಕೂಡಲೇ ವಿಮಾನವನ್ನು ನಾಗ್ಪುರದಲ್ಲಿ ತುರ್ತು ಲ್ಯಾಡಿಂಗ್ ಮಾಡಿ, ಬಳಿಕ ಅವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಳೆದ ವಾರವಷ್ಟೇ ನಾಗ್ಪುರದಲ್ಲಿ ಇಂಡಿಗೋ ಏರ್‌ಲೈನ್ಸ್ ಪೈಲಟ್ ಬೋರ್ಡಿಂಗ್ ಗೇಟ್‌ನಲ್ಲಿ ಪ್ರಜ್ಞೆ ತಪ್ಪಿ ಸಾವನ್ನಪ್ಪಿದ್ದರು.

ಇದೀಗ ಮತ್ತೊಬ್ಬ ಪ್ರಯಾಣಿಕ ಸಾವನ್ನಪ್ಪಿದ್ದಾರೆ. 62 ವರ್ಷದ ವ್ಯಕ್ತಿಯು ಪ್ರಯಾಣಿಕರು ಸಿಕೆಡಿ ಮತ್ತು ಕ್ಷಯರೋಗದಿಂದ ಬಳಲುತ್ತಿದ್ದರು ಮತ್ತು ವಿಮಾನದಲ್ಲಿ ರಕ್ತ ವಾಂತಿ ಮಾಡುತ್ತಿದ್ದರು.

ಮುಂದಿನ ಪ್ರಕ್ರಿಯೆಗಾಗಿ ಮೃತದೇಹವನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ. ದೇವಾನಂದ್ ತಿವಾರಿ ಇಂಡಿಗೋ ಏರ್‌ಲೈನ್ಸ್ ವಿಮಾನ ಸಂಖ್ಯೆ 6E 5093 ರಲ್ಲಿ ಪ್ರಯಾಣಿಸುತ್ತಿದ್ದರು.

ಅವರಿಗೆ ಕಿಡ್ನಿ ಸಮಸ್ಯೆ ಮತ್ತು ಟಿಬಿ ಇತ್ತು. ಪ್ರಯಾಣದ ಸಮಯದಲ್ಲಿ, ಅವರ ಆರೋಗ್ಯವು ಇದ್ದಕ್ಕಿದ್ದಂತೆ ಹದಗೆಟ್ಟಿತು.
ಸಾವನ್ನಪ್ಪಿದ ವ್ಯಕ್ತಿ ಕ್ಷಯರೋಗದಿಂದ ಬಳಲುತ್ತಿದ್ದರು ಎಮದು ಕಿಮ್ಸ್​​​ ಆಸ್ಪತ್ರೆಯ ಬ್ರ್ಯಾಂಡಿಂಗ್ ಮತ್ತು ಕಮ್ಯುನಿಕೇಷನ್ಸ್ ಡಿಜಿಎಂ ಏಜಾಜ್ ಶಮಿ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net