ಪಕ್ಷದ ಸಭೆಯಲ್ಲಿ ಬುದ್ಧಿವಾದ ಹೇಳಿದ ಮೊಯಿಲಿ, ಮುನಿಯಪ್ಪ!

Congress (2)
Published on

ಬೆಂಗಳೂರು: ಸರ್ಕಾರದ ಇತ್ತೀಚಿನ ಬೆಳವಣಿಗೆ ಕುರಿತು ಹಿರಿಯ ನಾಯಕರಿಬ್ಬರು ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಹಿತವಚನ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಮಾತನಾಡಿ, ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇದ್ದರೂ ನಾಯಕರು ಬಹಿರಂಗವಾಗಿ ಚರ್ಚೆ ನಡೆಸಬಾರದು. ಇಂತಹ ಬೆಳವಣಿಗೆಗೆ ಅವಕಾಶಕೊಡಬಾರದೆಂದು ಸಲಹೆ ನೀಡಿದರು.

ಅದೇ ರೀತಿ ಆಹಾರ ಸಚಿವ ಕೆ.ಎಚ್​.ಮುನಿಯಪ್ಪ ಮಾತನಾಡಿ, ಮೊದಲ ಬಾರಿ ಸಚಿವರಾಗಿರುವವರನ್ನು ಹೊರತುಪಡಿಸಿ ಉಳಿದ ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಹೇಳಿದರು.

ಹಳಬರು ಸಚಿವ ಸ್ಥಾನದಿಂದ ಕೆಳಗಿಳಿದರೆ ಮತ್ತಷ್ಟು ಮಂದಿಗೆ ಅವಕಾಶ ಸಿಕ್ಕಂತಾಗುತ್ತದೆ. ಈ ಮೂಲಕ ದೇಶದಲ್ಲಿ ಹೊಸ ಪರಂಪರೆ ಪ್ರಾರಂಭಿಸಿದಂತಾಗುತ್ತದೆ ಎಂದರಲ್ಲದೇ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡಬೇಕು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೂ ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

ಪಕ್ಷದಲ್ಲಿ ವಿವಿಧ ರೀತಿ ಆಂತರಿಕ ಪೈಪೋಟಿ ನಡೆಯುತ್ತಿರುವ ಸಂದರ್ಭದಲ್ಲಿ ಇವರಿಬ್ಬರ ಮಾತು ಸಾಕಷ್ಟು ಚರ್ಚೆಗೊಳಗಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net