ನೇಣಿಗೆ ಕೊರಳೊಡ್ಡಿದ ನಗರಸಭೆ ಸದಸ್ಯೆ; ಸಾಯಲು ಕಾರಣವೇನು?

Usha
Published on

ಹಾವೇರಿ: ನಗರಸಭೆ ಸದಸ್ಯೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ಹಾವೇರಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರಸಭೆಯ 23ನೇ ವಾರ್ಡ್ ಸದಸ್ಯೆ ಉಷಾ ಚಿನ್ನಿಕಟ್ಟಿ ಆತ್ಮಹತ್ಯೆಗೆ ಶರಣಾದವರು. ರಾಣೆಬೆನ್ನೂರು ವಿನಾಯಕ ನಗರದಲ್ಲಿರುವ ತಮ್ಮ ಮನೆಯಲ್ಲಿ ಅವರು ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಷಾ ನೇಣು ಹಾಕಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ. ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net