ಮುನ್ಸಿಪಲ್​ ಹೈಸ್ಕೂಲ್​ಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಒತ್ತಾಯ

24-RNR-05
Published on

ರಾಣೆಬೆನ್ನೂರ: ನಗರದ ಮುನ್ಸಿಪಲ್​ ಹೈಸ್ಕೂಲ್​ಗೆ ಅತಿಥಿ ಶಿಕ್ಷಕರ ನೇಮಕ ಮಾಡುವಂತೆ ಒತ್ತಾಯಿಸಿ ನಗರಸಭೆ ಪ್ರೌಢಶಾಲೆ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಮಂಗಳವಾರ ನಗರಸಭೆ ಆಯುಕ್ತ ಕ್ಕೀರಪ್ಪ ಇಂಗಳಗಿ ಅವರಿಗೆ ಮನವಿ ಸಲ್ಲಿಸಿದರು.

ಮುನ್ಸಿಪಲ್​ ಹೈಸ್ಕೂಲ್​ನಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗಿದೆ. ಆದ್ದರಿಂದ ಅತಿಥಿ ಶಿಕ್ಷಕರ ನೇಮಕ ಮಾಡುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ಡಾ. ಎಸ್​.ಎಲ್​. ಪವಾರ, ವೈ.ಜಿ. ಹಾವನೂರ, ವಿ.ವಿ. ಹರಪನಹಳ್ಳಿ, ಅಮರನಾಥ ಭೂತೆ, ಮನೋಹರ ಮೆಹರವಾಡೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net