ಆರ್ಥಿಕ ನೆರವು ಸದ್ಬಳಕೆ ಮಾಡಿಕೊಳ್ಳಿ

srl pm swanidhi
ಶಿರಾಳಕೊಪ್ಪ ಪುರಸಭೆಯಲ್ಲಿ ಏರ್ಪಡಿಸಿದ್ದ ಪಿಎಂ ಸ್ವನಿಧಿ, ಸ್ವನಿಧಿ ಸೇ ಸಮೃದ್ಧಿ ಕಾರ್ಯಕ್ರಮವನ್ನು ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ ಉದ್ಘಾಟಿಸಿದರು. ಫಕ್ಕೀರಪ್ಪ, ಉಮೇಶ್, ಕಾಶಿನಾಥ ಇತರರಿದ್ದರು.
Published on

ಶಿರಾಳಕೊಪ್ಪ: ನಮ್ಮ ದೇಶದ ಬೀದಿಬದಿ ವ್ಯಾಪಾರಿಗಳು ಆರೋಗ್ಯದಕಡೆ ಗಮನಹರಿಸದೆ ಜೀವನ ಹಾಳು ಮಾಡಿಕೊಳ್ಳುತ್ತಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಸುರೇಶ್ ಹೇಳಿದರು.
ಪುರಸಭೆ ಸಭಾಂಗಣದಲ್ಲಿ ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಪುರಸಭೆ ಆಶ್ರಯದಲ್ಲಿ ಆಯೋಜಿಸಿದ್ದ ಪಿಎಂ ಸ್ವನಿಧಿ ಸೇ ಸಮೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ.ನಿಂದ 2 ಲಕ್ಷ ರೂ.ವರೆಗೂ ಸಾಲ ನೀಡುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ರತ್ಮಮ್ಮ ಮಾತನಾಡಿ, ಮಹಿಳೆಯರ ಸ್ವಾವಲಂಬಿ ಬದುಕಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ಮಹಿಳೆಯರು ಅದನ್ನು ಪಡೆಯದೆ ಆರ್ಥಿಕ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಕಾನೂನು ಅರಿವಿಲ್ಲದೆ ಸಾಕಷ್ಟು ಬಾಲ್ಯವಿವಾಹಗಳನ್ನು ನಡೆಸಲಾಗುತ್ತಿದೆ. ಹಾಗೆಯೇ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇವುಗಳನ್ನು ತಡೆಯಲು ಪೋಕ್ಸೊ ಕಾಯ್ದೆ ಜಾರಿಗೆ ತಂದರೂ ಜಿಲ್ಲೆಯಲ್ಲಿ 820ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಎಂದರು.
ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಮಿಕ ಇಲಾಖೆಯ ಫಕ್ಕೀರಪ್ಪ, ಆರೋಗ್ಯ ನಿರೀಕ್ಷಕ ಉಮೇಶ್, ಸಮನ್ವಯ ಸಂಸ್ಥೆಯ ಕಾಶಿನಾಥ, ಪುರಸಭೆ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net