ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿ

munirathna-640x381
Published on

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಧ್ವನಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್, ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ, ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದ ಮೇಲೆ ವೈಯಾಲಿಕಾವಲ್ ಠಾಣೆಗೆ ದೂರು ಸಲ್ಲಿಸಿದ್ದರು. ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು, ಹಲ್ಲೆ ಮತ್ತು ಬೆದರಿಕೆ ಆರೋಪದಡಿ ದೂರು ಸಲ್ಲಿಸಿದ್ದರು. ಈ ಕುರಿತು ಪ್ರತ್ಯೇಕ ಎ್ಐಆರ್‌ಗಳು ದಾಖಲಾಗಿದ್ದವು.

ಕೋಲಾರ ಜಿಲ್ಲೆಯ ನಂಗಲಿ ಗ್ರಾಮದ ಬಳಿಯಿಂದ ಮುನಿರತ್ನ ಅವರನ್ನು ಶನಿವಾರ ಕರೆತಂದ ಪೊಲೀಸರು, ವೇಲು ನಾಯ್ಕರ್ ಕೊಟ್ಟ ದೂರಿನ ಮೆರೆಗೆ ಬಂಧನ ಮಾಡಿದ್ದಾರೆ. ಶನಿವಾರ ತಡರಾತ್ರಿ 12.30ರಲ್ಲಿ ನ್ಯಾಯಾಧೀಶರ ಗೃಹ ಕಚೇರಿಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಸಲುವಾಗಿ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್, ಎರಡು ದಿನ ಕಸ್ಟಡಿಗೆ ವಹಿಸಿ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net