ಅಂಜಲಿ ಕೊಲೆ ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಿ; ವಿರುಪಾಕ್ಷಪ್ಪ ಬಳ್ಳಾರಿ

je721538035802367-abc
Published on

ಹಾವೇರಿ: ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಕೇವಲ ಅಲ್ಪಸಂಖ್ಯಾತರ ಹಾಗೂ ಸಮಾಜಘಾತುಕ ವ್ಯಕ್ತಿಗಳ ಓಲೈಕೆ ಮಾಡುತ್ತಿದೆ. ಇತ್ತೀಚೆಗೆ ರಾಜ್ಯದಲ್ಲಿ ಸರಣಿ ಕೊಲೆಗಳು ನಡೆದರೂ ಕಾಂಗ್ರೆಸ್ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಖಂಡನೀಯ. ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೂ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇದೇ ರೀತಿ ಮುಂದುವರಿದರೆ ಕರ್ನಾಟಕ ರಾಜ್ಯ ದೇಶದಾದ್ಯಂತ ಗೂಂಡಾ ರಾಜ್ಯವೆಂದು ಕುಖ್ಯಾತಿ ಪಡೆಯತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net