

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಥಳಿಸಿ ಕೊಲೆ ಮಾಡಲಾಗಿದೆ.
ಹೊರವಲಯದ ಅಡ್ಯಾರ್ ಪದವು ಎಂಬಲ್ಲಿ ಇಂದು (ಶನಿವಾರ) ಬೆಳಗ್ಗೆ ಈ ಅವಘಡ ಸಂಭವಿಸಿದೆ. ಅಡ್ಯಾರ್ ಗ್ರಾಮ ಪಂಚಾಯಿತಿಯ ಬೆಜೆಪಿ ಬೆಂಬಲಿತ ಸದಸ್ಯ ಯಾಕುಬ್ ಕೊಲೆಯಾದವರು. ಇದನ್ನೂ ಓದಿರಿ ಬೆಂಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಅಡ್ಯಾರ್ನ ಶಾಕೀರ್ ಮತ್ತು ಯಾಕೂಬ್ ನಡುವೆ ಕ್ಷುಲ್ಲಕ್ಕ ಕಾರಣಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ. ಯಾಕೂಬ್ ಮೇಲೆ ಶಾಕೀರ್ ಕೈನಿಂದಲೇ ಮನಸೋ ಇಚ್ಛೆ ಥಳಿಸಿದ್ದಾನೆ. ನೆಲಕ್ಕೆ ದೂಡಿ ಎದೆಗೆ ಜೋರಾಗಿ ಒದ್ದ ಪರಿಣಾಮ ಯಾಕೂಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.