

ಹಾಸನ: ಮದುವೆಯಾಗಿದ್ದ ಯುವತಿಗೆ ಮೆಸೇಜ್ ಮಾಡಿದ್ದ ಎನ್ನುವ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರೀನಿವಾಸಪುರ ಬಳಿ ನಡೆದಿದೆ.
ಕೊಲೆಯಾದ ಯುವಕ ಗಂಗಾಧರ ಮದುವೆಯಾದ ಯುವತಿಯೊಬ್ಬರಿಗೆ ಮೆಸೇಜ್ ಮಾಡಿದ್ದ. ಈ ವಿಚಾರವಾಗಿ ಟೈಲರಿಂಗ್ ವೃತ್ತಿ ಮಾಡುತ್ತಿದ್ದ ಗಂಗಾಧರನನ್ನ ಯುವಕರ ತಂಡವೊಂದು ಕಾರಿನಲ್ಲಿ ಅಪಹರಿಸಿದ್ದಾರೆ. ನಂತರ ದೊಣ್ಣೆಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ಗಂಗಾಧರ್, ತನ್ನ ಅಣ್ಣನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಕೂಡಲೇ ಅಣ್ಣ ಮೋಹನ್ ಎಂಬುವರು ಗಂಗಾಧರ್ನನ್ನು ಚನ್ನರಾಯಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಗಂಗಾಧರ್ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.