ಶಾಸಕ ಜಿ.ಸೋಮಶೇಖರ್​ ರೆಡ್ಡಿ ವಿರುದ್ಧ ತಿರುಗಿಬಿದ್ದ ಮುಸ್ಲಿಮರು; ಬಳ್ಳಾರಿಯಲ್ಲಿ ಇಂದು ದಿಢೀರ್​ ಪ್ರತಿಭಟನೆ, ಹಲವೆಡೆ ರಸ್ತೆ ಸಂಚಾರ ಸ್ಥಗಿತ

Protest 4 jan 20
Published on

ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಗಿಡಿಗಿ ಚನ್ನಪ್ಪ ವೃತ್ತದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ ನೀಡಿದ ಹೇಳಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಮುಸ್ಲಿಮರು ಇಂದು ಅದೇ ಸ್ಥಳದಲ್ಲಿ ದಿಢೀರ್​ ಪ್ರತಿಭಟನೆ ನಡೆಸಿದರು.

ನಲ್ಲಚೆರವು ಪ್ರದೇಶದಲ್ಲಿರುವ ಶಾದಿಮಹಲ್ ದಿಂದ ಎಚ್.ಆರ್.ಗವಿಯಪ್ಪ ವೃತ್ತದ ಮೂಲಕ ಗಡಿಗಿ ಚನ್ನಪ್ಪ ವೃತ್ತಕ್ಕೆ ಮೆರವಣಿಗೆಯಲ್ಲಿ ಆಗಮಿಸಿದ್ದಾರೆ. ಎಚ್.ಆರ್.ಗವಿಯಪ್ಪ ವೃತ್ತದಿಂದ ಗಡಿಗಿ ಚನ್ನಪ್ಪ ವೃತ್ತ, ಇಂದಿರಾ ವೃತ್ತ, ಡಬಲ್ ರಸ್ತೆ, ಬೆಂಗಳೂರು ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಎಸ್ಪಿ ಸಿ.ಕೆ.ಬಾಬಾ, ಹೆಚ್ಚುವರಿ ಎಸ್ಪಿ ಬಿ.ಎನ್..ಲಾವಣ್ಯಾ ನೇತೃತ್ವದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಗಡಿಗಿ ಚನ್ನಪ್ಪ ವೃತ್ತದಲ್ಲಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲು ಎಸ್ಪಿ ಸಿ.ಕೆ.ಬಾಬಾ ಪರದಾಡಬೇಕಾಯಿತು. ಶಾಂತರಾಗುವಂತೆ ಎಸ್ಪಿ ಮಾಡುತ್ತಿರುವ ಮನವಿಗೆ ಪ್ರತಿಭಟನಾಕಾರರು ಕಿವಿಗೊಡುತ್ತಿಲ್ಲ.

ಶುಕ್ರವಾರ ಗಡಿಗಿ ಚನ್ನಪ್ಪ ವೃತ್ತದಲ್ಲಿ ದೇಶಭಕ್ತ ನಾಗರಿಕರ ವೇದಿಕೆಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿದರೆ ನಾವು ರೊಚ್ಚಿಗೇಳಬೇಕಾಗುತ್ತದೆ. ಜಾಸ್ತಿ ನಖರಾ ಬೇಡ ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಎಚ್ಚರಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net