ED ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: DK ಶಿವಕುಮಾರ್

untitled-design-38-687e667e87766
Published on

ಕನಕಪುರ: "ಇ.ಡಿ. ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನ ಪ್ರಕರಣವೇ ಸಾಕ್ಷಿ" ಎಂದು ಡಿಸಿಎಂ DK ಶಿವಕುಮಾರ್ ತಿಳಿಸಿದರು.

ಕನಕಪುರದ ಕೋಡಿಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಮೂಡಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಡಿಗೆ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಕೇಳಿದಾಗ, "ನನ್ನ ಪ್ರಕರಣವನ್ನೇ ತೆಗೆದುಕೊಳ್ಳಿ. ನನ್ನ ಮೇಲೆ ಕೇಸ್ ಹಾಕಿ ತಿಹಾರ್ ಜೈಲಿಗೆ ಕಳುಹಿಸಿದರು. ನಂತರ ಆ ಕೇಸ್ ರದ್ದಾಯಿತು. ರಾಜಕೀಯ ಒತ್ತಡಕ್ಕೆ ಸಿಲುಕುವ ಬಗ್ಗೆ ಇಡಿ ಪರಿಶೀಲನೆ ನಡೆಸಬೇಕು. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದ ಬಳಿಕ ಮೇಲ್ಮನವಿ ಸಲ್ಲಿಸುವ ಪ್ರಶ್ನೆ ಇರಲಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಈ ರೀತಿ ಹೇಳಿರಬೇಕು" ಎಂದರು.

ಕೇಂದ್ರ ಸರ್ಕಾರ ಇಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ ಎಂದು ಕೇಳಿದಾಗ, "ಈ ಕಾರಣಕ್ಕೆ ಈ ರೀತಿ ಮೇಲ್ಮನವಿ ಸಲ್ಲಿಸಲಾಗುತ್ತಿದೆ. ಬಿಜೆಪಿ ನಾಯಕರ ಮೇಲೆ ಮಾತ್ರ ಇಡಿ ಕೇಸ್ ದಾಖಲಾಗುತ್ತಿಲ್ಲ ಯಾಕೆ? ಕೇವಲ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಬರ್ಟ್ ವಾದ್ರಾ, ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಯಾಕೆ ಕೇಸ್ ಹಾಕಲಾಗುತ್ತಿದೆ. ಬಿಜೆಪಿಗೆ ಹೋದವರೆಲ್ಲಾ ಶುದ್ಧರೇ? ಇದೇ ಅಲ್ಲವೇ ಬಿಜೆಪಿ ವಾಷಿಂಗ್ ಮಷಿನ್" ಎಂದು ತಿಳಿಸಿದರು.

ಟನಲ್ ಕಾರಿಡಾರ್ ಅಗತ್ಯವಿದೆಯೇ ಎಂಬ ತೇಜಸ್ವಿ ಸೂರ್ಯ ಹೇಳಿಕೆ ಬಗ್ಗೆ ಕೇಳಿದಾಗ, "ಪಾಪ ಸಣ್ಣ ಹುಡುಗ, ಅವರ ಪಕ್ಷದಲ್ಲಿ ದೊಡ್ಡ ದೊಡ್ಡ ನಾಯಕರಿದ್ದಾರಲ್ಲಾ ಅವರ ಮೂಲಕ ಸದನದಲ್ಲಿ ಚರ್ಚೆ ಮಾಡಿಸಲಿ" ಎಂದು ತಿರುಗೇಟು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net