ನಾನು Engineer ಆಗ್ಬೇಕು ಅಂತ ನಮ್ಮ ತಂದೆ ಅನ್ಕೊಂಡಿದ್ರು, ಆದ್ರೆ... ಬಾಲ್ಯದ ನೆನಪು ಮೆಲುಕು ಹಾಕಿದ ಡಿಕೆಶಿ

Untitled design - 2025-09-15T141304.493
Published on

“ನಮ್ಮ ತಂದೆ ನನ್ನನ್ನು ಇಂಜಿನಿಯರ್ ಮಾಡಬೇಕು ಎಂದು ಬಯಸಿದ್ದರು. ಆದರೆ ನಾನು ಸರಿಯಾಗಿ ಓದಲಿಲ್ಲ. ನಮ್ಮ ತಂದೆ ಆಸೆ ಈಡೇರಿಸಬೇಕು ಎಂದು ಇಂಜಿನಿಯರಿಂಗ್ ಕಾಲೇಜು ಆರಂಭಿಸಿದೆ. ನಮ್ಮ ಮನೆಯಲ್ಲಿ ಇಬ್ಬರು ಮಕ್ಕಳು ಇಂಜಿನಿಯರ್. ಒಬ್ಬರು ಸಿವಿಲ್ ಇಂಜಿನಿಯರ್ ಮತ್ತೊಬ್ಬರು ಎಲೆಕ್ಟ್ರಿಕಲ್ ಇಂಜಿನಿಯರ್” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದರು.

ಇಂಜಿನಿಯರುಗಳ ದಿನಾಚರಣೆ ಅಂಗವಾಗಿ ನಗರದ ಕೆ.ಆರ್. ವೃತ್ತದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಇಂದು ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ (ಇಂಜಿನಿಯರ್ಸ್) ದಿನ ಆಚರಿಸಲಾಗುತ್ತಿದೆ. ಸಚಿವನಾಗಿ ಜಿಬಿಎ ಹಾಗೂ ನೀರಾವರಿ ಇಲಾಖೆಯಲ್ಲಿರುವ ಇಂಜಿನಿಯರ್ ಗಳ ಜೊತೆ ಕೆಲಸ ಮಾಡುತ್ತಿದ್ದೇನೆ. ಈ ಹಿಂದೆ ನಗರಾಭಿವೃದ್ಧಿ ಹಾಗೂ ಇಂಧನ ಸಚಿವನಾಗಿದ್ದಾಗಲೂ ಕೆಲಸ ಮಾಡಿದ್ದೆ. ಇಂಜಿನಿಯರ್ ಗಳು ದೇಶ ನಿರ್ಮಿಸುವವರು” ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net