ಮೈಕ್​ ಆಫ್​ ಮಾಡಿದ ಪ್ರಕರಣ; ನನ್ನ ಗೌರವಕ್ಕೆ ಧಕ್ಕೆಯಾಗಿದೆ ಎಂದ ಮಲ್ಲಿಕಾರ್ಜುನ ಖರ್ಗೆ

Mallikarjun Kharge
Published on

ನವದೆಹಲಿ: ಮಂಗಳವಾರ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್​ ಆಫ್​​ ಮಾಡಿದ ಕುರಿತು ಕಿಡಿಕಾರಿದ್ದ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಪ್ರತಿಭಟಿಸಿ ಸಭಾತ್ಯಾಗ ಮಾಡಿದ್ದವು.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಉಂಟಾಗಿದೆ ಎಂದಿದ್ದಾರೆ. ಮಣಿಪುರದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಜನಾಂಗೀಯ ಘರ್ಷಣೆ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದೆವು. ಆದರೆ, ಮಾತನಾಡುವ ವೇಳೆ ಮೈಕ್​ ಆಫ್​​ ಮಾಡಿರುವ ಕ್ರಮ ಸರಿಯಲ್ಲ ಎಂದು ಕಿಡಿಕಾರಿದ್ಧಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಇದು ನನ್ನ ಪಾಲಿನ ಅವಕಾಶವನ್ನು ಕಿತ್ತುಕೊಂಡು ಸ್ವಾಭಿಮಾನಕ್ಕೆ ಸವಾಲು ಹಾಕಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ಸದನವನ್ನು ನಡೆಸುವುದು ಪ್ರಜಾಪ್ರಭುತ್ವದ ಉಲ್ಲಂಘನೆಯಾಗುತ್ತದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net