

ಮೈಸೂರು: ನಗರದ ಮೇಯರ್ ಆಗಿರುವ ರುಕ್ಮಿಣಿ ಮಾದೇಗೌಡ ಅವರ ಮಹಾನಗರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಹೈ ಕೋರ್ಟ್ ಜಿಲ್ಲಾ ನ್ಯಾಯಾಲಯದ ಆದೇಶವನ್ನೇ ಎತ್ತಿ ಹಿಡಿದಿದೆ.
ರುಕ್ಮಿಣಿ ಮಾದೇಗೌಡ ಚುನಾವಣೆ ವೇಳೆ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ. ಈ ಕುರಿಯಾಗಿ ಪ್ರತಿಕ್ರಿಯಿಸಿರುವ ಅವರ ಪತಿ ಮಾದೇಗೌಡ, ತೀರ್ಪು ಸಮಾಧಾನ ತಂದಿಲ್ಲ ಎಂದು ತಿಳಿಸಿದ್ದಾರೆ. ಈ ವಿಚಾರವಾಗಿ ತಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿಯೂ ಅವರು ತಿಳಿಸಿದ್ದಾರೆ.
ಪಾಲಿಕೆ ಸದಸ್ಯತ್ವ ರದ್ದಾಗಿರುವ ಹಿನ್ನೆಲೆಯಲ್ಲಿ ಮೇಯರ್ ಸ್ಥಾನಕ್ಕೂ ಕಂಟಕ ಬಂದೊದಗಿದೆ. ರುಕ್ಮಿಣಿ ಅವರು ಹೈ ಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವವರೆಗೂ ಅವರಿಗೆ ಮೇಯರ್ ಅಧಿಕಾರವಿರುವುದಿಲ್ಲ. ರುಕ್ಮಿಣಿ ಅವರ ಪತಿ ಮೈಸೂರು ಜಿಪಂ ಸದಸ್ಯರಾಗಿದ್ದಾರೆ.