ಅರಣ್ಯ ನಾಶದಿಂದ ಹವಾಮಾನ ವೈಪರೀತ್ಯ

05NGD4
Published on

ನಂಜನಗೂಡು: ನೈಸರ್ಗಿಕ ಸಮತೋಲನ ಕಾಪಾಡಿಕೊಳ್ಳದಿದ್ದರೆ ಪ್ರಾಕೃತಿಕ ವಿಕೋಪದಂಥ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ವರುಣ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ತಾಲೂಕು ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾಗರಿಕ ಸಮಾಜ ಗಿಡ ಮರಗಳನ್ನು ತನ್ನ ಅಗತ್ಯಕ್ಕೆ ಅನುಗುಣವಾಗಿ ನಾಶ ಮಾಡುತ್ತಿರುವ ಪರಿಣಾಮ ಹವಾಮಾನ ವೈಪರೀತ್ಯದಂಥ ಸನ್ನಿವೇಶಗಳು ಸೃಷ್ಟಿಯಾಗುತ್ತಿವೆ. ಪ್ರಕೃತಿದತ್ತವಾದ ಗಾಳಿ, ಮಳೆ, ಬೆಳೆ, ಜಲ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯೂ ಆಗಿದೆ. ನಾವು ಮೈಮರೆತರೆ ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ. ಜತೆಗೆ ಭವಿಷ್ಯದಲ್ಲಿ ಉತ್ತಮ ಗಾಳಿ, ಮಳೆ ನಿರೀಕ್ಷಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಗಿಡ ಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ನಮ್ಮೆಲ್ಲರ ಗಮನ ಇರಬೇಕು ಎಂದರು.
ತಾಪಂ ಉಪಾಧ್ಯಕ್ಷ ಆರ್.ಗೋವಿಂದರಾಜನ್, ತಾಪಂ ಇಒ ಶ್ರೀಕಂಠರಾಜೇ ಅರಸ್, ವ್ಯವಸ್ಥಾಪಕ ನಂಜುಂಡಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net