ಊಟಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡ ಸಾವು

Car Accident
Published on

ಮೈಸೂರು: ಊಟಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ ನಿಧನರಾಗಿದ್ದಾರೆ.

ಗುರುವಾರ ಸಂಜೆ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಸ್ನೇಹಿತರ ಕುಟುಂಬದ ಜೊತೆ ಸ್ವಾಮಿಗೌಡ ಪ್ರವಾಸಕ್ಕೆ ತೆರಳಿದ್ದರು. ಅಪಘಾತದಲ್ಲಿ ಸ್ವಾಮಿಗೌಡ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಊಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೈಸೂರು ಜಿಲ್ಲೆಯಲ್ಲಿ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ರಾಮಚಂದ್ರ (65) ಎಂದು ಗುರುತಿಸಲಾಗಿದೆ. ಇವರು ಹುಣಸೂರು ನಗರದ ಸರಸ್ವತಿಪುರಂ ನಿವಾಸಿ. ಅನಾರೋಗ್ಯದಿಂದ ಬಳಲುತ್ತಿದ್ದ ರಾಮಚಂದ್ರ, ಲಕ್ಷ್ಮಣ ತೀರ್ಥ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ವಿಶೇಷಚೇತನರಾಗಿದ್ದ ರಾಮಚಂದ್ರಗೆ ಮಾತು ಬರುತ್ತಿರಲಿಲ್ಲ. ಲೋಕೋಪಯೋಗಿ ಇಲಖೆಯಲ್ಲಿ ದಿನಗೂಲಿಯಾಗಿ ಕೆಲಸ ಮಾಡಿಕೊಂಡಿದ್ದ. ಕಳೆದ ಮೂರು ತಿಂಗಳಿನಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಘಟನೆ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net