ಮೈಸೂರು ದಸರಾ 2024: ರಾಜಮನೆತನಕ್ಕೆ ವಿಶೇಷ ಆಹ್ವಾನ ಕೊಟ್ಟ ಡಾ. ಎಚ್.ಸಿ. ಮಹದೇವಪ್ಪ

ವಿಜಯವಾಣಿ-2024-09-29T195011.699
Published on

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ 2024ರ (Mysuru Dasara) ಮಹೋತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ ಅವರು ಇಂದು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ (Wadeyar Family) ಅವರಿಗೆ ಅಧಿಕೃತ ಆಹ್ವಾನ ನೀಡಿದರು.

ಭಾನುವಾರ (ಸೆ.29) ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಟುವರ್ಧನ, ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಚಂದ್ರಶೇಖರ್ ಸೇರಿದಂತೆ ಮುಂತಾದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net