ಪೌರಾಣಿಕ ನಾಟಕಗಳು ಜೀವನದ ಪ್ರತಿಬಿಂಬ

28 krp 03
ಕೆ.ಆರ್.ಪೇಟೆ ಪಟ್ಟಣದ ಪರಸಭೆಯ ಮೈದಾನದಲ್ಲಿ ಕರ್ನಾಟಕ ರತ್ನ ಡಾ. ರಾಜಕುಮಾರ್ ಸಾಂಸ್ಕೃತಿಕ ಕಲಾ ಪರಿಷತ್ ಮಂಡ್ಯ ಜಿಲ್ಲಾ ಶಾಖೆಯ ಉದ್ಘಾಟನೆ ಅಂಗವಾಗಿ ಆಯೋಜಿಸಿದ್ದ ಪೌರಾಣಿಕ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಶಾಸಕ ಎಚ್.ಟಿ.ಮಂಜು ಮಾತನಾಡಿದರು.
Published on

ಕೆ.ಆರ್.ಪೇಟೆ : ಪೌರಾಣಿಕ ನಾಟಕಗಳು ನಮ್ಮ ಜೀವನದ ಪ್ರತಿಬಿಂಬವಾಗಿವೆ, ಸತ್ಯಕ್ಕೆ ಎಂದಿಗೂ ಸಾವಿಲ್ಲ, ನ್ಯಾಯಕ್ಕೆ ಜಯ ಎಂಬ ಸಂದೇಶವನ್ನು ಸಾರುತ್ತಿವೆ ಎಂದು ಶಾಸಕ ಎಚ್.ಟಿ.ಮಂಜು ಅಭಿಪ್ರಾಯಪಟ್ಟರು.

ಪಟ್ಟಣದ ಪರಸಭೆಯ ಮೈದಾನದಲ್ಲಿ ಕರ್ನಾಟಕ ರತ್ನ ಡಾ. ರಾಜಕುಮಾರ್ ಸಾಂಸ್ಕೃತಿಕ ಕಲಾ ಪರಿಷತ್ ಮಂಡ್ಯ ಜಿಲ್ಲಾ ಶಾಖೆಯ ಉದ್ಘಾಟನೆ ಅಂಗವಾಗಿ ಕಲಾ ಪರಿಷತ್ತಿನ ಕಲಾವಿದರು ಅಭಿನಯಿಸಿದ ಶಿವಭಕ್ತ ಚಂಡಾಸುರ ಅಥವಾ ಹೇಮಾವತಿ ಪರಿಣಯ ಪೌರಾಣಿಕ ನಾಟಕ ಪ್ರದರ್ಶನವನ್ನು ಸೋಮವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಜೀವನದ ಮೌಲ್ಯಗಳನ್ನು ಪಾತ್ರಧಾರಿಗಳ ಮೂಲಕ ಕಾಣುತ್ತಿರುವ ನಾವು ಸಾಧನೆ ಮಾಡಲಾಗದಿದ್ದರೂ ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ಮಾರ್ಗದಲ್ಲಿಯೇ ಸಾಗುವ ಮೂಲಕ ಗುರಿ ಮುಟ್ಟೋಣ ಎಂದು ಕರೆ ನೀಡಿದರು.

ಮಹಿಳಾ ಕಲಾವಿದರು ಪ್ರದರ್ಶಿಸಿದ ನಾಟಕ ಕಲಾ ರಸಿಕರ ಮೆಚ್ಚುಗೆಗೆ ಪಾತ್ರವಾಯಿತು. ಪುರುಷ ಪಾತ್ರಗಳನ್ನು ಅಭಿನಯಿಸಿ ಮಹಿಳಾ ಕಲಾವಿದರು ಎಲ್ಲರ ಗಮನ ಸೆಳೆದರು. ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಮ್, ಮುಖಂಡರಾದ ಶೀಳನೆರೆ ಮೋಹನ್, ಎಂ.ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ಡಾ.ರಾಜಕುಮಾರ್ ಸಾಂಸ್ಕೃತಿಕ ಕಲಾ ಪರಿಷತ್ ರಾಜ್ಯಾಧ್ಯಕ್ಷ ಪರಶುರಾಮ್ ಗೊರಪ್ಪರವರ್, ರಾಜ್ಯ ಉಪಾಧ್ಯಕ್ಷ ಸಿ.ಆರ್. ಪುಟ್ಟರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ಜಿಲ್ಲಾ ಗೌರವಾಧ್ಯಕ್ಷ ಸಿ.ಬಿ.ಸುನೀಲ್‌ಕುಮಾರ್, ಜಿಲ್ಲಾ ಅಧ್ಯಕ್ಷ ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸರಸ್ವತಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net