ಮಕ್ಕಳ ಕಣ್ಣೀರು, ಯುವಕರ ಕಣ್ಣೀರು ಸಿದ್ದರಾಮಯ್ಯ ಸರಕಾರಕ್ಕೆ ತಟ್ಟಲಿದೆ: ಎನ್.ರವಿಕುಮಾರ್

congress vs bjp
Published on

ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಎಸಗಿದ್ದಾರೆ.

"ರಾಜ್ಯ ಸರ್ಕಾರ ಕರೆಂಟ್ ವಿಚಾರದಲ್ಲೂ ಮೋಸ ಮಾಡುತ್ತಿದೆ. ಭರವಸೆಯಂತೆ 200 ಯೂನಿಟ್ ಉಚಿತ ವಿದ್ಯುತ್ ಕೊಡಬೇಕು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ 2 ಸಾವಿರ ಎಂದು ಹೇಳಿ ತದನಂತರ ಮನೆಯೊಡತಿಗೆ ಎಂದು ಬದಲಿಸಿ ಇಂದು ಮನೆಮನೆಯಲ್ಲೂ ಜಗಳ ತಂದಿಟ್ಟಿದೆ" ಎಂದು ಆರೋಪಿಸಿದರು.

"ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಿಂದ ಬಸ್‍ಗಳು ರಶ್ ಆಗುತ್ತಿವೆ. ಶಾಲಾ ಮಕ್ಕಳು ಬಸ್ ಹತ್ತಲಾಗುತ್ತಿಲ್ಲ. ವಿದ್ಯಾರ್ಥಿಗಳು ಶಾಲಾ- ಕಾಲೇಜಿಗೆ ಹೋಗಲಾಗದ ದುಸ್ಥಿತಿ ಎದುರಾಗಿದೆ. ಮಕ್ಕಳ ಕಣ್ಣೀರು, ಯುವಕರ ಕಣ್ಣೀರು ಈ ಸಿದ್ದರಾಮಯ್ಯ ಸರಕಾರಕ್ಕೆ ತಟ್ಟಲಿದೆ. 5 ಗ್ಯಾರಂಟಿ ಯೋಜನೆಗಳ ಷರತ್ತುಗಳನ್ನು ಶೀಘ್ರವೇ ತೆಗೆದುಹಾಕಿ" ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net