ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳ (ಕೆಒಎ್)ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಸ್.ಸೂಗನಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.