ದುಬೈನಲ್ಲಿ ನಾಡಪ್ರಭು ಕೆಂಪೇಗೌಡರ ಉತ್ಸವ

dubai
Published on

ಬೆಂಗಳೂರು: ಯುಎಇ ಒಕ್ಕಲಿಗರ ಸಂಘ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಉತ್ಸವವನ್ನು ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟನೆ ಮಾಡಿದರು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಯುಎಇ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ ನಂದಕಿಶೋರ್, ಉಪಾಧ್ಯಕ್ಷ ಹರೀಶ್ ಕೋಡಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಕನ್ನಡ ಬಂಧುಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ದುಬೈನ ಶೇಕ್ ರಶೀದ್ ಆಡಿಟೋರಿಯಂನಲ್ಲಿ ಈ ಉತ್ಸವ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net