ನಾಡಪ್ರಭು ಕೆಂಪೇಗೌಡ ಜಯಂತಿ ಇಂದು

Published on

ನಾಗಮಂಗಲ: ನಾಡಪ್ರಭು ಕೆಂಪೇಗೌಡರ 156ನೇ ಜಯಂತ್ಯುತ್ಸವವನ್ನು ಜೂ.27 ರಂದು ಪಟ್ಟಣದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ನಾಗಮಂಗಲ ತಾಲೂಕು ಒಕ್ಕಲಿಗರ ಸಂಘ ಮತ್ತು ಟೌನ್ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಆದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಅಂದು ಮಧ್ಯಾಹ್ನ 2.30 ಗಂಟೆಗೆ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೂ ಮುನ್ನ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಜಾನಪದ ಕಲಾಮೇಳದೊಂದಿಗೆ ಮೆರವಣಿಗೆಯಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಶ್ರೀ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಆವರಣಕ್ಕೆ ಕೊಂಡೊಯ್ಯಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಹಿಸಲಿದ್ದು, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು.ಜಿ.ಮಾದೇಗೌಡ, ಕೆ.ವಿವೇಕಾನಂದ, ಪುರಸಭೆ ಅಧ್ಯಕ್ಷ ಅಲಿಅನ್ಸರ್ ಪಾಷ, ಉಪಾಧ್ಯಕ್ಷೆ ವಸಂತಲಕ್ಷ್ಮೀ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ನಾಡಪ್ರಭು ಕೆಂಪೇಗೌಡರ ಬಗ್ಗೆ ಮೈಲಾರಪಟ್ಟಣ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಎಂ.ಎನ್.ಮಂಜುನಾಥ್ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರು, ಚುನಾಯಿತ ಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net