ರಾಜೇಂದ್ರ ಕುಮಾರ್‌ಗೆ ಬಿಜೆಪಿ ಆಹ್ವಾನ ?

rajekumar
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಜನೌಷಧಿ ಮಳಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದ್ದಾರೆ. ಅವರು ರಾಷ್ಟ್ರ ಮಟ್ಟದ ನಾಯಕ ಆಗಬೇಕು ಎಂಬುದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಹಿತ ನಮ್ಮೆಲ್ಲರ ಆಸೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಭಾನುವಾರ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ ಸಮಾರಂಭದಲ್ಲಿ ಈ ರೀತಿಯ ಪರೋಕ್ಷ ಪ್ರಸ್ತಾವವನ್ನು ಅವರು ಮುಂದಿಟ್ಟರು. ಆದರೆ ಅದಕ್ಕಾಗಿ ಅವರು (ಎಂ.ಎನ್.ರಾಜೇಂದ್ರ ಕುಮಾರ್) ನಮ್ಮ ಬಳಿ ಕುಳಿತು ಕೊಳ್ಳಬೇಕು. ಇದು ಬಹಿರಂಗವಾಗಿ ಚರ್ಚಿಸುವ ವಿಚಾರ ಅಲ್ಲ. ನಾನು ಅವರ ಜೊತೆ ವೈಯಕ್ತಿಕವಾಗಿ ಮಾತನಾಡುತ್ತೇನೆ ಎಂದು ಹೇಳಿ ನಗುವ ಮೂಲಕ ಅವರು ತಮ್ಮ ಮಾತಿನ ಉದ್ದೇಶವನ್ನು ಇನ್ನಷ್ಟು ಖಚಿತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net