

ಗುಂಡ್ಲುಪೇಟೆ: ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಾಮುಲ್ ವತಿಯಿಂದ ನಿರ್ಮಿಸಿರುವ ನಂದಿನಿ ಉತ್ಪನ್ನಗಳ ಮಾರಾಟ ಕೇಂದ್ರವನ್ನು ಗುರುವಾರ ಶಾಸಕ ಎಚ್.ಎಂ.ಗಣೇಶ ಪ್ರಸಾದ್ ಉದ್ಘಾಟಿಸಿದರು.
ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಎಸ್.ಪ್ರಭಾಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಪಿ.ನವೀನ್ ಕುಮಾರ್, ಗೋಪಾಲಸ್ವಾಮಿ ಬೆಟ್ಟ ವಲಯಾರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್, ಉಪ ವಲಯಾರಣ್ಯಾಧಿಕಾರಿ ಆನಂದ್, ಪುರಸಭೆ ಅಧ್ಯಕ್ಷ ಮಧುಸೂದನ್, ಕಾಡಾ ಮಾಜಿ ಅಧ್ಯಕ್ಷ ನಂಜಪ್ಪ, ಚಾಮುಲ್ ನಿರ್ದೇಶಕರಾದ ನಂಜುಂಡ ಪ್ರಸಾದ್, ಸುನಿಲ್, ಎಂ.ಡಿ.ರಾಜಕುಮಾರ, ಮಾರುಕಟ್ಟೆ ವ್ಯವಸ್ಥಾಪಕ ಶಿವಕುಮಾರ್, ಮಾರುಕಟ್ಟೆ ಅಧಿಕಾರಿ ರಾಘವೇಂದ್ರರಾವ್ ಹಾಗೂ ಇತರರು ಇದ್ದರು.