ಬೆಂಗಳೂರು:
ಕರ್ನಾಟಕ ವಿಶ್ವವಿದ್ಯಾಲಯದ 74ನೇ ಘಟಿಕೋತ್ಸವದಲ್ಲಿ ಆಕ್ಸ್‌ರ್ಡ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಸ್.ಎನ್.ವೆಂಕಟಲಕ್ಷ್ಮೀ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭನವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು, ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಸ್.ಅಯ್ಯಪ್ಪನ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಬಳಿಕ ಮಾತನಾಡಿದ ಸಚಿವ ಡಾ. ಎಂ.ಸಿ. ಸುಧಾಕರ್ ಅವರು, ಎಸ್.ಎನ್.ವೆಂಕಟಲಕ್ಷ್ಮೀ ನರಸಿಂಹರಾಜು ಅವರ ಶೈಕ್ಷಣಿಕ ಸಾಧನೆಯನ್ನು ಮುಕ್ತಕಂಠದಿಂದ ಪ್ರಶಂಸಿದರು.
ಆಕ್ಸ್‌ಫರ್ಡ ಶಿಕ್ಷಣ ಸಂಸ್ಥೆಯು ಆರಂಭದಿಂದಲೂ ನವೀನ ಮತ್ತು ಆಧುನಿಕ ಬೋಧನಾ ವಿಧಾನಗಳು, ಮೌಲ್ಯಗಳ ಮೂಲಕ ತಾಂತ್ರಿಕ ಕೌಶಲ್ಯ ಮತ್ತು ನಿರ್ವಹಣಾ ಯೋಗ್ಯತೆಯ ಅಭಿವೃದ್ಧಿಗಾಗಿ ಶ್ರಮಿಸುವ ಮೂಲಕ ಶಿಕ್ಷಣ ಕ್ರಾಂತಿ ಮಾಡಿದೆ. ವಿದ್ಯಾರ್ಥಿಗಳು ಭವಿಷ್ಯದ
ಕ್ರಿಯಾಶೀಲ ನಾಯಕರನ್ನಾಗಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿದೆ. ಬೋಧನೆ ಮತ್ತು ಕಲಿಕೆಯ ವಿಧಾನದ ಪರಿಕಲ್ಪನಾ ಮತ್ತು ವಿಶ್ಲೇಷಣಾತ್ಮಕ ಮೂಲಕ್ಕೆ ಒತ್ತು ನೀಡುವಲ್ಲಿ ನರಸಿಂಹರಾಜು ಅವರ ಕೊಡುಗೆ ಅಗಾಧವಾದುದು ಎಂದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಬಿ. ಗುಡಸಿ, ಕುಲಸಚಿವ ಎನ್.ವೈ. ಮಟ್ಟಿಹಾಳ ಸೇರಿ ಹಲವರು ಉಪಸ್ಥಿತರಿದ್ದರು.
*ನಮ್ಮ ಸೇವೆಯನ್ನು ಗುರುತಿಸಿ ಕರ್ನಾಟಕ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಇದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ. ಗೌರವ ಡಾಕ್ಟರೇಟ್‌ನಿಂದ ನನ್ನ ಜವಾಬ್ದಾರಿ ಹೆಚ್ಚಾಗಿದ್ದು, ಸಮಾಜ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಕೊಡುಗೆ ನೀಡಲು ಶ್ರಮಿಸುತ್ತೇನೆ.