

ಪಿರಿಯಾಪಟ್ಟಣ: ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಹುಟ್ಟು ಹಬ್ಬದ ಅಂಗವಾಗಿ ತಾಲೂಕು ಬಿಜೆಪಿ ಘಟಕದಿಂದ ಅಂಗವಿಕಲರು, ಕುಶಲಕರ್ಮಿಗಳು, ಸಮಾಜ ಸೇವಕರು, ಪೌರಕಾರ್ಮಿಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಸನ್ಮಾನಿಸಲಾಯಿತು.
ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ತಾಲೂಕು ಬಿಜೆಪಿ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಕೌಲನಹಳ್ಳಿ ಸೋಮಶೇಖರ್ ಮಾತನಾಡಿ, ಇಡೀ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಮಾಡಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ದೇಶದ ಸಾಮಾಜಿಕ, ಆರ್ಥಿಕ, ವೈಜ್ಞಾನಿಕ ಕ್ಷೇತ್ರಗಳು ಸೇರಿದಂತೆ ವಿವಿಧ ವಲಯಗಳಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ ಎಂದು ತಿಳಿಸಿದರು.
ಮಾಜಿ ಶಾಸಕ ಎಚ್.ಸಿ. ಬಸವರಾಜ್, ಕೊಪ್ಪ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ. ರಾಜೇಂದ್ರ, ಆರ್.ಟಿ.ಸತೀಶ್, ತಾಲೂಕು ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ವೀರಭದ್ರ, ಬೆಮ್ಮತ್ತಿ ಚಂದ್ರು, ಮುಖಂಡರಾದ ಲೋಕಪಾಲಯ್ಯ, ರಾಘವೇಂದ್ರ, ಬೆಮ್ಮತಿ ಕೃಷ್ಣ, ರಮೇಶ್, ವಿಜಯಕುಮಾರ್, ಸ್ವಾಮಿ, ನಳಿನಿ, ಶುಭಗೌಡ, ಗೀತಾಗೌಡ ಹಾಜರಿದ್ದರು.