ರೈತರ ಹಿತಾಸಕ್ತಿಯ ವಿಷಯದಲ್ಲಿ ರಾಜಿ ಇಲ್ಲ ;ಟ್ರಂಪ್​ಗೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ಕಳುಹಿಸಿದ ಮೋದಿ |Narendra Modi

Narendra Modi
Published on

Narendra Modi: ಭಾರತವನ್ನು ಸ್ವಾವಲಂಬಿಯಾಗಿರುವುದರಿಂದ ಸರ್ಕಾರ ತನ್ನ ರೈತರ ಹಿತಾಸಕ್ತಿಗಳಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಆಗಸ್ಟ್​​ 15) ಪ್ರತಿಪಾದಿಸಿದರು.

79 ನೇ ಸ್ವಾತಂತ್ರ್ಯ ದಿನದಂದು ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಪ್ರಧಾನಿ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಎಲ್ಲರಿಗೂ ಆಹಾರವನ್ನು ಖಚಿತಪಡಿಸಿಕೊಳ್ಳುವುದು ಒಂದು ಸವಾಲಾಗಿತ್ತು, ಆದರೆ ನಮ್ಮ ರೈತರು ನಮ್ಮನ್ನು ಸ್ವಾವಲಂಬಿಗಳನ್ನಾಗಿ ಮಾಡಿದರು. ರೈತರ ಹಿತಾಸಕ್ತಿಯ ವಿಚಾರದಲ್ಲಿ ಮೋದಿ ಗೋಡೆಯಂತೆ ನಿಂತಿದ್ದು, ಈ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.

ಆತ್ಮನಿರ್ಭರ ಭಾರತ

ಆತ್ಮನಿರ್ಭರ ಭಾರತಕ್ಕಾಗಿ ಸರ್ಕಾರದ ನಿಲುವನ್ನು ಪುನರುಚ್ಚರಿಸುತ್ತಾ, ಇತರ ದೇಶಗಳ ಮೇಲೆ ಅವಲಂಬಿತರಾಗುವುದು ವಿಪತ್ತಿಗೆ ದಾರಿ ಮಾಡಿಕೊಡಲಿದ್ದು, ನಮ್ಮ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ನಾವು ಸದಾ ಸ್ವಾವಲಂಬಿಗಳಾಗಿರಬೇಕು ಎಂದು ಹೇಳಿದರು.

ಜಾಗತಿಕ ಮಾರುಕಟ್ಟೆಗಳಲ್ಲಿ ಭಾರತದ ಸಾಮರ್ಥ್ಯವನ್ನು ಸಾಬೀತುಪಡಿಸಲು ನಮ್ಮದೇ ಆದ ರಸಗೊಬ್ಬರಗಳು ಮತ್ತು ಯುದ್ಧ ವಿಮಾನಗಳಿಗೆ ಸ್ಥಳೀಯ ಎಂಜಿನ್‌ಗಳನ್ನು ಅಭಿವೃದ್ಧಿಪಡಿಸಲು ಅವರು ಸ್ಪಷ್ಟ ಕರೆಯನ್ನು ನೀಡಿದರು. ನಮ್ಮ ಇಂಧನ ಅಗತ್ಯಗಳನ್ನು ಪೂರೈಸಲು ನಾವು ಅನೇಕ ದೇಶಗಳ ಮೇಲೆ ಅವಲಂಬಿತರಾಗಿದ್ದೇವೆ ಎಂದು ನಮಗೆ ತಿಳಿದಿದೆ. ಆದರೆ ನಿಜವಾದ ಸ್ವಾವಲಂಬಿ ಭಾರತವನ್ನು ನಿರ್ಮಿಸಲು, ನಾವು ಇಂಧನ ಸ್ವಾತಂತ್ರ್ಯವನ್ನು ಸಾಧಿಸಬೇಕು ಎಂದರು.

ಕಳೆದ 11 ವರ್ಷಗಳಲ್ಲಿ, ನಮ್ಮ ಸೌರಶಕ್ತಿ ಸಾಮರ್ಥ್ಯವು 30 ಪಟ್ಟು ಹೆಚ್ಚಾಗಿದೆ... ಹತ್ತು ಹೊಸ ಪರಮಾಣು ರಿಯಾಕ್ಟರ್‌ಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತಿವೆ. ಭಾರತವು 100ನೇ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ ನಮ್ಮ ಪರಮಾಣು ಶಕ್ತಿ ಸಾಮರ್ಥ್ಯವನ್ನು ಹತ್ತು ಪಟ್ಟು ಹೆಚ್ಚಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net