

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣದಿಂದ ಮುಜುಗರಕ್ಕೊಳಗಾಗಿರುವ ನೂತನ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ನಾಸೀರ್ ಹುಸೇನ್ ಶಿವಾಜಿನಗರ ರೌಡಿಶೀಟರ್ ಇಫ್ತಿಯಾಕ್ ಪೈಲ್ವಾನ್ ಅಹಮದ್ ಜತೆ ಕಾಣಿಸಿಕೊಳ್ಳುವ ಮೂಲಕ ಹೊಸ ವಿವಾದಕ್ಕೆ ಕಾರಣವಾಗಿದ್ದಾರೆ.
ನಾಸೀರ್ ಹುಸೇನ್ ಅವರಿಗೆ ಇಫ್ತಿಯಾಕ್ ಹೂಗುಚ್ಚ ನೀಡಿ ಶುಭಕೋರುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಾಜ್ಯಸಭಾ ಸದಸ್ಯರಿಗೂ ರೌಡಿಗೂ ಏನು ಸಂಬಂಧ? ಭೇಟಿಯಾಗಿ ಮಾತುಕತೆ ಮಾಡುವ ಅವಶ್ಯಕತೆ ಏನಿತ್ತು? ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ.