200 ಅಡಿ ಆಳದ ಕಂದಕಕ್ಕೆ ಬಿದ್ದ ಬಸ್​: 7 ಪ್ರಯಾಣಿಕರು ಸಾವು, 15 ಮಂದಿಗೆ ಗಾಯ..bus fell into 200 feet deep ditch

nashik gujarat highway accident
Published on

 ಗುಜರಾತ್​​: ( bus fell into 200 feet deep ditch )  ಖಾಸಗಿ ಬಸ್​​ವೊಂದು  ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಬಿದ್ದು, ಈ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ. ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಭಾರಿ ಅಪಘಾತ ಸಂಭವಿಸಿದೆ.

ಐಷಾರಾಮಿ ಬಸ್ 200 ಅಡಿ ಆಳದ ಕಮರಿಗೆ ಬಿದ್ದಿದೆ. ಭಾನುವಾರ ಬೆಳಗಿನ ಜಾವ 5:30ರ ಸುಮಾರಿಗೆ ಈ ಅವಘಡ ಸಂಭವಿಸಿದೆ.  ಅಪಘಾತದಲ್ಲಿ 7 ಪ್ರಯಾಣಿಕರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದಿದೆ. ನಾಸಿಕ್‌ನ ಸಪುತಾರಾ ಘಾಟ್ ಮೂಲಕ ಬಸ್ ಸೂರತ್ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಪ್ರಯಾಣಿಕರು ಮಧ್ಯಪ್ರದೇಶದ ನಿವಾಸಿಗಳಾಗಿದ್ದು, ನಾಸಿಕ್‌ನ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಲು ಬಂದಿದ್ದರು. ಸದ್ಯ ಪೊಲೀಸ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net