ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Application
Published on

ಅಲ್ಪಸಂಖ್ಯಾತರ ನಿರ್ದೇಶನಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ (ಮುಸ್ಲಿಂಮರು, ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಪಾರ್ಸಿಗಳು) ಸಮುದಾಯದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕೊರ್ಸ್- ಪೂರ್ಣಕಾಲಿಕ ಸ್ನಾತಕೋತ್ತರು, ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಬಾರದು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ. 15.00 ಲಕ್ಷಗಳು ಮೀರಿರಬಾರದು, ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ವಿದೇಶಿ ವಿಶ್ವವಿದ್ಯಾಲಯವು QSTop-500 University Ranking ಪಟ್ಟಿಯಲ್ಲಿ ಸ್ಥಾನ ಪಡೆದಿರಬೇಕು, ವಿದ್ಯಾರ್ಥಿ ವೇತನ ಪಡೆಯಲು NPCI Active Status & ಬ್ಯಾಂಕ್ ನೊಂದಿಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯವಾಗಿರುತ್ತದೆ.

 ಆಸಕ್ತ ಅಭ್ಯಥಿಗಳು ವೆಬ್‌ಸೈಟ್ https://sevasindhu.karnataka.gov.in/Sevasindhu/DepartmentServices ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಬಹುದಾಗಿದ್ದು, ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಇಲ್ಲಿಗೆ ನಿಗದಿಪಡಿಸಿದ ದಿನಾಂಕದoದು ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ.

 ಹೆಚ್ಚಿನ ಮಾಹಿತಿಗಾಗಿ: https://dom.karnataka.gov.in , Help Desk Number8277799990, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಆಜಾದ್ ಭವನ, ಸಿ.ಎ: ನಂ-1 ಶೋಭ ಗಾರ್ಡನ್ ಪಕ್ಕ, ದಂಡಿಮಾರಮ್ಮನ ದೇವಸ್ಥಾನದ ಎದುರು, ಬೆಂಗಳೂರು- ಮೈಸೂರು ರಸ್ತೆ, ಮೈಸೂರು ಜಿಲ್ಲೆ ಇವರ ಕಚೇರಿ ದೂ.ಸಂ:0821-2422088 ನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net