ಫೆ.11ರಂದು ರಾಷ್ಟ್ರೀಯ ಜನತಾ ನ್ಯಾಯಾಲಯ

*ಜಿಲ್ಲಾ ನ್ಯಾಯಾಲಯದಲ್ಲಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
*ಜಿಲ್ಲಾ ನ್ಯಾಯಾಲಯದಲ್ಲಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Published on

ತುಮಕೂರು: ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜಿ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಲು ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಫೆ.11ರಂದು ರಾಷ್ಟ್ರೀಯ ಜನತಾ ನ್ಯಾಯಾಲಯ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶೆ ಕೆ.ಬಿ.ಗೀತಾ ತಿಳಿಸಿದರು.

ಜಿಲ್ಲಾ ನ್ಯಾಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನತಾ ನ್ಯಾಯಾಲಯದಲ್ಲಿ ನೀಡಲಾದ ತೀರ್ಪುಗಳ ಬಗ್ಗೆ ಮೇಲ್ಮನವಿಗೆ ಅವಕಾಶವಿರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ಪಕ್ಷಗಾರರಿಗೆ ತ್ವರಿತವಾಗಿ ತೀರ್ಪು ದೊರಕುವುದರಿಂದ, ನ್ಯಾಯಾಲಯಗಳಿಗೆ ಅಲೆಯುವುದು ತಪ್ಪುತ್ತದೆ ಎಂದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಷ್ಟ್ರೀಯ ಜನತಾ ನ್ಯಾಯಾಲಯ ನಡೆಯಲಿದ್ದು, ಜನರು ಸದುಪಯೋಗಪಡಿಸಿಕೊಳ್ಳಬಹುದು ಎಂದರು.

2022ರ ನ.12ರಂದು ಆಯೋಜಿಸಿದ್ದ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿ ಇದ್ದ 2,479 ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ 1,51,097 ಪ್ರಕರಣ ಇತ್ಯರ್ಥಗೊಳಿಸಲಾಗಿದೆ, ಮೋಟಾರು ವಾಹನ ಅಪಘಾತಗಳಿಗೆ ಸಂಬಂಧಿಸಿದ 129 ಪ್ರಕರಣ ತೀರ್ಮಾನವಾಗಿ 1433500 ರೂ. ಪರಿಹಾರ ಹಣ ವಿತರಿಸಲಾಗಿದೆ ಎಂದು ತಿಳಿಸಿದರು.

ಫೆ.11ರ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಎಲ್ಲ ರೀತಿಯ ರಾಜಿ ಆಗಬಹುದಾದ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಿದ್ದು, ಪಕ್ಷದಾರರ ಮಧ್ಯೆ ಇರುವ ವೈಮನಸ್ಸು ಕಡಿಮೆಯಾಗಿ ಸೌಹಾರ್ದತೆ ಹೆಚ್ವುತ್ತದೆ ಮತ್ತು ಇದರಿಂದ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆಗಳು ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ, ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಗಮನಹರಿಸಬಹುದು ಎಂದರು.

ಅತ್ಯಂತ ಅಪರೂಪದ ಪ್ರಕರಣಗಳಿಗೆ ಮಾತ್ರ ಮೇಲಿನ ನ್ಯಾಯಾಲಯಗಳಿಗೆ ಅಪೀಲು ಹೋಗಬಹುದೇ ಹೊರತು ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜನತಾ ನ್ಯಾಯಾಲಯಗಳಲ್ಲಿ ನೀಡುವ ತೀರ್ಪೇ ಅಂತಿಮವಾಗಿರುತ್ತದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net