

ಬೆಂಗಳೂರು: ರಾಜ್ಯದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಿಜಿಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಶನಿವಾರ ವಿಶೇಷ ವಿಮಾನದಲ್ಲಿ ನಗರಕ್ಕೆ ಆಗಮಿಸಿದರು.
ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದ ಗೃಹ ಸಚಿವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.
ನಗರದ ಅರಮನೆ ಆವರಣದಲ್ಲಿ ನಡೆಯುವ ಖಾಸಗಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವರು ಮಧ್ಯಾಹ್ನ 3 ಗಂಟೆ ನಂತರ ಹುಬ್ಬಳ್ಳಿಗೆ ತೆರಳಲಿದ್ದಾರೆ.
ಹುಬ್ಬಳ್ಳಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನಡೆಯುವ ಅರಿವು ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. (ದಿಗ್ವಿಜಯ ನ್ಯೂಸ್)