ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ; ಗಡ್ಡೆಪ್ಪ ಗುಂಜಟಗಿ

1-RNR-05
Published on

ರಾಣೆಬೆನ್ನೂರ: ವಿದ್ಯಾರ್ಥಿನಿಯರು ಓದಿನಲ್ಲಿ ಶ್ರಮ, ಶ್ರದ್ಧೆ ಹಾಗೂ ನಿರಂತರ ಪ್ರಯತ್ನ ಮಾಡಿದರೆ ಎಲ್ಲ ಕ್ಷೇತ್ರದಲ್ಲೂ ಯಶಸ್ಸು ಕಾಣಲು ಸಾಧ್ಯ ಎಂದು ಶಹರ ಠಾಣೆ ಪಿಎಸ್‌ಐ ಗಡ್ಡೆಪ್ಪ ಗುಂಜಟಗಿ ಹೇಳಿದರು.
ನಗರದ ಕೆಎಲ್‌ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪಠ್ಯದ ಜತೆಗೆ ಇತರ ಸಾಹಿತ್ಯ, ಸಾಮಾನ್ಯ ಜ್ಞಾನ ಹೆಚ್ಚಿಸುವ ಪುಸ್ತಕಗಳನ್ನು ವಿದ್ಯಾರ್ಥಿ ಜೀವನದಲ್ಲಿ ಒಂದು ಬಾರಿಯಾದರೂ ಓದಲೇಬೇಕು. ಅಂದಾಗ ಎಲ್ಲ ವಿಷಯಗಳಲ್ಲೂ ವಿದ್ಯಾರ್ಥಿಗಳು ಪಕ್ವತೆ ಹೊಂದಲು ಸಾಧ್ಯ ಎಂದರು.
ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ವಿ.ಪಿ. ಲಿಂಗನಗೌಡ್ರ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕರಾದ ನಾರಾಯಣ ನಾಯಕ, ಶೋಭಾ ದೊಡ್ಡನಾಗಳ್ಳಿ, ಮಂಜಪ್ಪ ಸಣ್ಣಬಸಪ್ಪನವರ, ನೇತ್ರಾವತಿ ಪೂಜಾರ, ನಿಸರ್ಗಾ ಕೂಲಿ, ರಕ್ಷಿತಾ ಎಂ.ಕೆ., ಶಶಿಕಲಾ ಅಕ್ಕಸಾಲಿಗ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net