ರಾಷ್ಟ್ರೀಯ ಯುವ ಜನೋತ್ಸವ: ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ

modi in hubli
Published on

ಧಾರವಾಡ: ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ 26ನೇ ರಾಷ್ಟ್ರೀಯ ಯುವ ಜನೋತ್ಸವ ಸಂಭ್ರಮ ಕಳೆಗಟ್ಟಿದ್ದು, ಕಾರ್ಯಕ್ರಮ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ಇನ್ನು ಕೆಲವೇ ಕ್ಷಣದಲ್ಲಿ ಕಾರ್ಯಕ್ರಮ ಶುರುವಾಗಲಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನಕ್ಕೆ ರೋಡ್‌ಶೋ ಮೂಲಕ ಪ್ರಧಾನಿ ತೆರಳುತ್ತಿದ್ದಾರೆ.

ರಾಷ್ಟ್ರೀಯ ಯುವ ದಿನದಂದೇ 26ನೇ ರಾಷ್ಟ್ರೀಯ ಯುವ ಜನೋತ್ಸವ ನಡೆಯುತ್ತಿದ್ದು, ಯುವ ಭಾರತ ಕಟ್ಟುವ ಸಂಕಲ್ಪದ ಕಾರ್ಯಕ್ರಮಕ್ಕೆ 28 ರಾಜ್ಯಗಳು, 8 ಕೇಂದ್ರಾಡಳಿತ ಪ್ರದೇಶಗಳ 7,500 ಯುವ ಪ್ರತಿನಿಧಿಗಳು ಆಗಮಿಸಿದ್ದಾರೆ. ವಿವಿಧ ರಾಜ್ಯಗಳ ಸಾಂಸ್ಕೃತಿಕ ಶ್ರೀಮಂತಿಕೆ ಪರಿಚಯಿಸುವ 5 ದಿನದ ಕಾರ್ಯಕ್ರಮ ಇದಾಗಿದ್ದು, ದೇಸಿ ಕ್ರೀಡೆಗಳ ಝಲಕ್​ ಕೂಡ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net