ಶೇಖ್ ಹಸೀನಾಗೆ ಮರಣದಂಡನೆ: ನೆರೆಯ ರಾಷ್ಟ್ರದ ಹಿತಾಸಕ್ತಿಗಳಿಗೆ ಭಾರತ ಬದ್ಧ ಎಂದ MEA | Sheikh Hasina

ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಪ್ರಧಾನಿ ನರೇಂದ್ರ ಮೋದಿ
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಪ್ರಧಾನಿ ನರೇಂದ್ರ ಮೋದಿ
Published on
ನವದೆಹಲಿ: ಪ್ರಧಾನಿ ಶೇಖ್ ಹಸೀನಾಗೆ (Sheikh Hasina) ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ವಿಧಿಸಿದ ಮರಣದಂಡನೆ ತೀರ್ಪಿಗೆ ಭಾರತ ಪ್ರತಿಕ್ರಿಯಿಸಿದೆ. ಅಲ್ಲದೆ, ಆ ನಿಟ್ಟಿನಲ್ಲಿ ನಾವು ಯಾವಾಗಲೂ ಎಲ್ಲಾ ಪಾಲುದಾರರೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುತ್ತೇವೆ ಎಂದು ಹೇಳಿದೆ.
ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ವಿದೇಶಾಂಗ ಸಚಿವಾಲಯ, ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಅಂತರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಘೋಷಿಸಿದ ತೀರ್ಪನ್ನು ಭಾರತ ಗಮನಿಸಿದೆ. ಅಲ್ಲದೆ, ನೆರೆಯ ರಾಷ್ಟ್ರವಾಗಿ, ಭಾರತವು ಬಾಂಗ್ಲಾದೇಶದ ಜನರ ಹಿತಾಸಕ್ತಿಗಳಿಗೆ ಬದ್ಧವಾಗಿದೆ. ಇದರಲ್ಲಿ ಶಾಂತಿ, ಪ್ರಜಾಪ್ರಭುತ್ವ, ಸೇರ್ಪಡೆ ಮತ್ತು ಸ್ಥಿರತೆಯೂ ಸೇರಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಆ ನಿಟ್ಟಿನಲ್ಲಿ ನಾವು ಯಾವಾಗಲೂ ಎಲ್ಲಾ ಪಾಲುದಾರರೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುತ್ತೇವೆ. ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯವು ಪರಾರಿಯಾದ ಆರೋಪಿ ಶೇಖ್ ಹಸೀನಾರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ವಿನಂತಿಸಿದ ನಂತರವೂ ಈ ಹೇಳಿಕೆ ಬಂದಿದೆ. ಅಲ್ಲದೆ, ಮಾಜಿ ಪ್ರಧಾನಿ ಬಾಂಗ್ಲಾದೇಶಕ್ಕೆ ಮರಳುವುದನ್ನು ಖಚಿತಪಡಿಸಿಕೊಳ್ಳುವುದು ಭಾರತದ ಜವಾಬ್ದಾರಿ ಎಂದು MEA ಹೇಳಿದೆ.

ಮಾನವೀಯತೆಯ ವಿರುದ್ಧದ ಅಪರಾಧ; ಹಸೀನಾಗೆ ಮರಣದಂಡನೆ

ಬಾಂಗ್ಲಾದೇಶದಲ್ಲಿ ಜುಲೈ-ಆಗಸ್ಟ್ 2024 ರ ಅಶಾಂತಿಯ ಸಮಯದಲ್ಲಿ ಭುಗಿಲೆದ್ದ ಹಿಂಸಾಚಾರ ಮತ್ತು ಹತ್ಯೆಗಳಲ್ಲಿ ಹಸೀನಾ ವಹಿಸಿದ ಪಾತ್ರಕ್ಕಾಗಿ ಐಸಿಟಿ ಸೋಮವಾರ ಮರಣದಂಡನೆ ವಿಧಿಸಿದೆ. ಕಳೆದ ವರ್ಷದ ವಿದ್ಯಾರ್ಥಿ ನೇತೃತ್ವದ ದಂಗೆಯ ಮೇಲೆ ಕ್ರೂರ ಕ್ರಮ ಕೈಗೊಳ್ಳಲು ಆದೇಶಿಸಿದ್ದರು ಎಂದು ವಿಚಾರಣೆಯ ನಂತರ ನ್ಯಾಯಮಂಡಳಿಯು ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಹಸೀನಾರನ್ನು ತಪ್ಪಿತಸ್ಥರೆಂದು ಘೋಷಿಸಿದೆ.
ದೇಶದೊಳಗೆ ಶೇಖ್ ಹಸೀನಾ ಅವರಿಗೆ ಸೇರಿದ ಎಲ್ಲಾ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ನ್ಯಾಯಾಲಯ ಆದೇಶಿಸಿದೆ. ಇದೇ ತೀರ್ಪಿನಲ್ಲಿ, ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್​ರಿಗೆ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಮರಣದಂಡನೆ ವಿಧಿಸಲಾಯಿದೆ. ಅಲ್ಲದೆ, ಮಾಜಿ ಪೊಲೀಸ್ ಮುಖ್ಯಸ್ಥ ಚೌಧರಿ ಅಬ್ದುಲ್ಲಾ ಅಲ್-ಮಾಮುನ್​ರಿಗೆ ಇದೇ ರೀತಿಯ ಅಪರಾಧಗಳಿಗಾಗಿ ಐದು ವರ್ಷಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿತು.

ಭಾರತದಿಂದ ಹಸೀನಾರನ್ನು ಕರೆತರಲು ಬಾಂಗ್ಲಾದೇಶ ಆಗ್ರಹ

ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯವು ಪತ್ರವೊಂದರಲ್ಲಿ, ಮಾಜಿ ಪ್ರಧಾನಿಯನ್ನು ಹಿಂದಿರುಗಿಸಲು ಭಾರತದೊಂದಿಗೆ ಮಾಡಿಕೊಂಡಿರುವ ಹಸ್ತಾಂತರ ಒಪ್ಪಂದವನ್ನು ಉಲ್ಲೇಖಿಸಿದೆ. ಹಸೀನಾ ತಮ್ಮ ತಾಯ್ನಾಡಿನಿಂದ ಹೊರಹಾಕಲ್ಪಟ್ಟಾಗಿನಿಂದ ಭಾರತದಲ್ಲಿಯೇ ಉಳಿದುಕೊಂಡಿದ್ದಾರೆ.
ಮಾನವೀಯತೆಯ ವಿರುದ್ಧದ ಅಪರಾಧಗಳಲ್ಲಿ ಶಿಕ್ಷೆಗೊಳಗಾದ ಈ ವ್ಯಕ್ತಿಗಳಿಗೆ ಬೇರೆ ಯಾವುದೇ ದೇಶದಿಂದ ಆಶ್ರಯ ನೀಡುವುದು ಅತ್ಯಂತ ಸ್ನೇಹಪರವಲ್ಲದ ಕೃತ್ಯ ಮತ್ತು ನ್ಯಾಯವನ್ನು ಕಡೆಗಣಿಸುವ ಕೃತ್ಯವಾಗುತ್ತದೆ ಎಂದು ಬಾಂಗ್ಲಾದೇಶ ಸಚಿವಾಲಯದ ಪತ್ರದಲ್ಲಿ ತಿಳಿಸಲಾಗಿದೆ,(ಏಜೆನ್ನೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net