ಬಿಜೆಪಿ ನೇತೃತ್ವದ ಮೈತ್ರಿಕೂಟ ಈ ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ತನ್ನ ಕಾರ್ಯಕ್ಷಮತೆಯನ್ನು ಸುಧಾರಿಸಿಕೊಂಡಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಗಿರಿರಾಜ್ ಸಿಂಗ್, ಈ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ, ಮತದಾರರು ಯಾವುದೇ ಅಭ್ಯರ್ಥಿಗಳ ಮುಖ ನೋಡಬೇಡಿ. ನಿತೀಶ್ ಕುಮಾರ್ ಮುಖ ನೋಡಿ, ಬಡವರಿಗಾಗಿ, ಯುವಕರಿಗಾಗಿ, ರೈತರಿಗಾಗಿ ಕೆಲಸ ಮಾಡಿದ ನರೇಂದ್ರ ಮೋದಿ ಮುಖ ನೋಡಿ ಮತ ನೀಡಿ ಎಂದರು.