ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, 10 "ದೋಡಾದಲ್ಲಿ ನಡೆದ ದುರದೃಷ್ಟಕರ ರಸ್ತೆ ಅಪಘಾತದಲ್ಲಿ ನಮ್ಮ 10 ವೀರ ಭಾರತೀಯ ಸೇನೆಯ ಸೈನಿಕರು ಸಾವನ್ನಪ್ಪಿರುವುದು ತೀವ್ರ ದುಃಖ ತಂದಿದೆ. ನಮ್ಮ ವೀರ ಸೈನಿಕರ ಅದ್ಭುತ ಸೇವೆ ಮತ್ತು ಅತ್ಯುನ್ನತ ತ್ಯಾಗವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಈ ದುಃಖದ ಸಮಯದಲ್ಲಿ, ಇಡೀ ರಾಷ್ಟ್ರವು ದುಃಖಿತ ಕುಟುಂಬಗಳೊಂದಿಗೆ ಒಗ್ಗಟ್ಟು ಮತ್ತು ಬೆಂಬಲದೊಂದಿಗೆ ನಿಂತಿದೆ. ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಉತ್ತಮ ಚಿಕಿತ್ಸೆ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಅವರ ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ" ಎಂದು ಬರೆದಿದ್ದಾರೆ.