200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿ ಹಿಂಪಡೆಯಲು ಅನುಮತಿಸಿದ ಸುಪ್ರೀಂ ಕೋರ್ಟ್! Jacqueline Fernandez in Supreme Court

ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯಲು ಸುಪ್ರೀಂ ಕೋರ್ಟ್ ಅ
ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯಲು ಸುಪ್ರೀಂ ಕೋರ್ಟ್ ಅ
Published on

ಪ್ರಮುಖ ಮುಖ್ಯಾಂಶಗಳು

  • 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ
  • ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯಲು ಸುಪ್ರೀಂ ಕೋರ್ಟ್ ಅನುಮತಿ
  • ಇಡಿ (ED) ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದ ನಟಿ
ನವದೆಹಲಿ: ಜಾರಿ ನಿರ್ದೇಶನಾಲಯದ (ED) ಪ್ರಾಸಿಕ್ಯೂಷನ್ ದೂರನ್ನು ರದ್ದುಗೊಳಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez in Supreme Court) ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ (ಜೂ.25) ಹಿಂಪಡೆಯಲು ಅನುಮತಿ ನೀಡಿದೆ.
ಆರೋಪಿ ಸುಕೇಶ್ ಚಂದ್ರಶೇಖರ್​ ಜೊತೆ ಸೇರಿಕೊಂಡು ಬಾಲಿವುಡ್​ ನಟಿ ಜಾಕ್ವಲಿನ್​ ಫರ್ನಾಂಡಿಸ್​ ಸುಮಾರು 200 ಕೋಟಿ ವರ್ಗಾವಣೆ ನಡೆಸಿದ್ದಾರೆಂದು ದೆಹಲಿ ಹೈಕೋರ್ಟ್​ ತೀರ್ಪನ್ನು ನೀಡಿತ್ತು. ಈ ಅರ್ಜಿ ವಿಚಾರಣೆ ನಡಿಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ನ್ಯಾಯಪೀಠವು ಜಾಕ್ವೆಲಿನ್​ಗೆ ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಿತು.

ಜೂನ್​ 11 ರಂದು ವಿಚಾರಣೆ ನಡೆಯಬೇಕಿತ್ತು!

ಜೂನ್ 11 ರಂದು ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಅತುಲ್ ಎಸ್. ಚಂದೂರ್ಕರ್ ಅವರ ನ್ಯಾಯ ಪೀಠದ ಮುಂದೆ ಈ ಪ್ರಕರಣವನ್ನು ಪಟ್ಟಿ ಮಾಡಲಾಗಿತ್ತು. ಆದರೆ, ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಮಗ ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಾಜರಾಗಿದ್ದ ಕಾರಣ, ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು.
ಸಂಬಂಧಿತ ಪ್ರಕರಣಗಳಲ್ಲಿ ಒಂದರಲ್ಲಿ, ನನ್ನ ಮಗ ಸರ್ಕಾರದ ಪರವಾಗಿ ಹಾಜರಾಗಿದ್ದರು. ಆದ್ದರಿಂದ ಪ್ರಕರಣವನ್ನು ಬೇರೆ ಪೀಠದ ಮುಂದೆ ಇಡಬೇಕು ಎಂದು ನ್ಯಾಯಮೂರ್ತಿ ಮಿಶ್ರಾ ಹೇಳಿದ್ದರು. ಹೀಗಾಗಿ ಈ ಪ್ರಕರಣ ಜೂನ್​ 25 ರಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ನ್ಯಾಯಪೀಠದಲ್ಲಿ ಇದರ ವಿಚಾರಣೆ ನಡೆಯಿತು.
ಗುರುವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಜಾಕ್ವೆಲಿನ್ ಸುಪ್ರೀಂ ಕೋರ್ಟ್‌ನಿಂದ ತನ್ನ ಅರ್ಜಿಯನ್ನು ಹಿಂಪಡೆಯಲು ಅನುಮತಿ ಕೋರಿದ್ದು, ಸುಪ್ರೀಂ ಕೋರ್ಟ್ ಆಕೆಯ ಕೋರಿಕೆಯನ್ನು ಪುರಸ್ಕರಿಸಿ ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಿತು.

ನಾನು ವಿಚಾರಣೆಗೆ ಸಿದ್ಧ

ತನ್ನ ವಿಶೇಷ ರಜೆ ಅರ್ಜಿಯಲ್ಲಿ ಜಾಕ್ವೆಲಿನ್, ED ಯ ಪ್ರಾಸಿಕ್ಯೂಷನ್ ದೂರನ್ನು ರದ್ದುಗೊಳಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶ ಮತ್ತು ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನ್ನ ವಿರುದ್ಧ ಆರೋಪಗಳನ್ನು ರೂಪಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದರು.
ಇದಕ್ಕೂ ಮೊದಲು, ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ದೆಹಲಿ ನ್ಯಾಯಾಲಯದ ಮುಂದೆ ತಾನು ತಪ್ಪಿತಸ್ಥನಲ್ಲ ಎಂದು ವಾದಿಸಿ ವಿಚಾರಣೆಯನ್ನು ಎದುರಿಸಲು ಇಚ್ಛೆ ವ್ಯಕ್ತಪಡಿಸಿದ್ದರು.
ಈ ಪ್ರಕರಣದಲ್ಲಿ ಜಾಕ್ವೆಲಿನ್ ಸರ್ಕಾರಿ ಸಾಕ್ಷಿಯಾಗಲು ಬಯಸಿದ ನಂತರ ಕೆಳಹಂತದ ನ್ಯಾಯಾಲಯ ಹಾಗೂ ದೆಹಲಿ ಹೈಕೋರ್ಟ್​ ಅರ್ಜಿಯನ್ನು ವಜಾಮಾಡಿತ್ತು. ನಟಿ ಜಾಕ್ವಾಲಿನ್​ ಸಲ್ಲಿಸಿದ್ದ ಅರ್ಜಿಗೆ ವಿರೋಧ ವ್ಯಕ್ತ ಪಡಿಸಿದ್ದ ಜಾರಿ ನಿರ್ದೇಶನಾಲಯ, ತನಿಖೆಯ ಸಮಯದಲ್ಲಿ ನಟಿಯ ಹೇಳಿಕೆ ತೃಪ್ತಿಕರವಾಗಿಲ್ಲ, ಅವರು ಸಂಪೂರ್ಣ ಸತ್ಯವನ್ನು ಇಲ್ಲಿವರೆಗೆ ಬಹಿರಂಗಪಡಿಸಿಲ್ಲ ಎಂದಿತ್ತು.
ಚಂದ್ರಶೇಖರ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆಂದು ತಿಳಿದ ನಂತರವೂ ಜಾಕ್ವೆಲಿನ್ ಅವರೊಂದಿಗೆ ಸಂಪರ್ಕದಲ್ಲಿದ್ದರು. ಹಾಗೆಯೇ ನಮ್ಮ ತನಿಖೆಗೆ ಇಕೆ ಸಂಪೂರ್ಣವಾಗಿ ಸಹಕರಿಸಲಿಲ್ಲ ಎಂದು ತನಿಖಾ ಸಂಸ್ಥೆ ಆರೋಪಿಸಿದೆ, (ಏಜನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net