ನಗರದ ಹೊರವಲಯದ ನಿವಾಸಿಗಳಲ್ಲಿ ವಾಂತಿ, ಭೇದಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಇಂದೋರ್‌ನ ವಿವಿಧ ಭಾಗಗಳಲ್ಲಿ ಇಂತಹ ಪ್ರಕರಣಗಳು ಸತತವಾಗಿ ವರದಿಯಾಗುತ್ತಿವೆ. ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿನ ಲೋಪವೇ ಈ ಅವಘಡಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೈಪ್‌ಲೈನ್‌ಗಳಲ್ಲಿನ ಸೋರಿಕೆಯಿಂದಾಗಿ ಚರಂಡಿ ನೀರು ಕುಡಿಯುವ ನೀರಿನೊಂದಿಗೆ ಮಿಶ್ರಣವಾಗಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.