ಛತ್ತೀಸ್‌ಗಢ : ಗುರುವಾರ (ಡಿ.18) ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಮೂವರು ನಕ್ಸಲ (Naxlas) ರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋಲಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಬೆಳಿಗ್ಗೆ ಜಿಲ್ಲಾ ಮೀಸಲು ಪಡೆಯ ತಂಡವೊಂದು ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಶೋಧ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಇಲ್ಲಿಯವರೆಗೆ ಮಹಿಳೆ ಸೇರಿದಂತೆ ಮೂವರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಈ ವರ್ಷ ಇಲ್ಲಿಯವರೆಗೆ ಛತ್ತೀಸ್‌ಗಢದಲ್ಲಿ ನಡೆದ ಎನ್‌ಕೌಂಟರ್‌ಗಳಲ್ಲಿ 284 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅದರಲ್ಲಿ ಸುಕ್ಮಾ, ಬಿಜಾಪುರ ಮತ್ತು ದಂತೇವಾಡ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ 255 ನಕ್ಸಲರನ್ನು ನಿರ್ನಾಮ ಮಾಡಲಾಗಿದ್ದು, ರಾಯ್‌ಪುರ ವಿಭಾಗದ ಗರಿಯಾಬಂದ್ ಜಿಲ್ಲೆಯಲ್ಲಿ 27 ಇತರ ನಕ್ಸಲರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ದುರ್ಗ್ ವಿಭಾಗದ ಮೊಹ್ಲಾ-ಮನ್‌ಪುರ-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಇಬ್ಬರು ನಕ್ಸಲರು ಭದ್ರತಾ ಪಡೆಗಳ ಗುಂಡಿಗೆ ಹತರಾಗಿದ್ದಾರೆ.(ಏಜನ್ಸೀಸ್).