ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೋರ್ ತಾಲೂಕಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ನಡೆದಿದೆ. 65 ವರ್ಷದ ವೃದ್ಧನೊಬ್ಬ ಕೇವಲ ನಾಲ್ಕು ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ, ನಂತರ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ಈ ಘಟನೆಯು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.