ಬಂಗಾಳದ ಇತಿಹಾಸದಲ್ಲಿ ಹೊಸ ಯುಗ; ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ! ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ | Suvendu Adhikari

ಬಂಗಾಳದ ಇತಿಹಾಸದಲ್ಲಿ ಹೊಸ ಯುಗ; ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ! ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಮಾನ ವಚನ
ಬಂಗಾಳದ ಇತಿಹಾಸದಲ್ಲಿ ಹೊಸ ಯುಗ; ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ! ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಮಾನ ವಚನ
Published on
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದಶಕಗಳ ಕಾಲದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಳ್ವಿಕೆಗೆ ಅಧಿಕೃತವಾಗಿ ತೆರೆ ಬಿದ್ದಿದೆ. ಬಂಗಾಳದ ಬಿಜೆಪಿಯ ಶಕ್ತಿಶಾಲಿ ನಾಯಕ ಸುವೇಂದು ಅಧಿಕಾರಿ(Suvendu Adhikari) ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. 
ಶುಕ್ರವಾರ (ಮೇ.8) ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅವರನ್ನು ಅವಿರೋಧವಾಗಿ ನಾಯಕನನ್ನಾಗಿ ಆಯ್ಕೆ ಮಾಡಲಾಗಿದ್ದು, ಅವರು ಬಂಗಾಳದ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಲಿದ್ದಾರೆ.

ನಾಳೆ ಬೆಳಿಗ್ಗೆ 11ಕ್ಕೆ ಪ್ರಮಾಣವಚನ ಸ್ವೀಕಾರ

ಕೋಲ್ಕತ್ತಾದ ಪರೇಡ್ ಗ್ರೌಂಡ್‌ನಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಗೆ ಭವ್ಯ ಪ್ರಮಾಣವಚನ ಸಮಾರಂಭ ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ ಸೇರಿದಂತೆ ಎನ್‌ಡಿಎ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಆಗಮಿಸಲಿದ್ದಾರೆ.

ಮಮತಾ ಕೋಟೆಯಲ್ಲಿ 'ದೀದಿ'ಗೆ ಎರಡನೇ ಬಾರಿ ಸೋಲುಣಿಸಿದ ಸುವೇಂದು!

ಸುವೇಂದು ಅಧಿಕಾರಿ ಅವರ ಈ ಗೆಲುವು ಕೇವಲ ರಾಜಕೀಯ ವಿಜಯವಲ್ಲ, ಇದು ಅವರ ವೈಯಕ್ತಿಕ ವರ್ಚಸ್ಸಿನ ಗೆಲುವು ಕೂಡ ಹೌದು.
ಭವಾನಿಪುರದಲ್ಲಿ ಜಯ: ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಎಂದೇ ಕರೆಯಲ್ಪಡುವ 'ಭವಾನಿಪುರ' ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ಅವರು ಮಮತಾ ಅವರನ್ನು 15,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಸುವೇಂದು 73,917 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆಯುವಲ್ಲಿ ಮಾತ್ರ ಯಶಸ್ವಿಯಾದರು.
ನಂದಿಗ್ರಾಮದ ಇತಿಹಾಸ: 2021ರ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾ ಅವರನ್ನು ಸೋಲಿಸಿದ್ದ ಸುವೇಂದು, ಈ ಬಾರಿ ನಂದಿಗ್ರಾಮ ಮತ್ತು ಭವಾನಿಪುರ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿ ತಮ್ಮ ಪರಾಕ್ರಮ ಮೆರೆದಿದ್ದಾರೆ.

ಸುವೇಂದು ಅಧಿಕಾರಿ: ರಾಜಕೀಯ ಹಾದಿ

ಒಮ್ಮೆ ಮಮತಾ ಬ್ಯಾನರ್ಜಿ ಅವರ ಅತ್ಯಂತ ಆಪ್ತ ಸಹೋದ್ಯೋಗಿಯಾಗಿದ್ದ ಸುವೇಂದು, 2021ರ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಶಾಸಕರಾಗಿ: ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅನುಭವ ಹೊಂದಿದ್ದಾರೆ (2006, 2016, 2021, 2026).
ಸಂಸದರಾಗಿ: 2009 ಮತ್ತು 2014ರಲ್ಲಿ ತಮ್ಲುಕ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.
ನಂದಿಗ್ರಾಮದ ನಾಯಕ: ಬಂಗಾಳದ ಕ್ರಾಂತಿಕಾರಿ ನಂದಿಗ್ರಾಮ ಚಳವಳಿಯ ಮೂಲಕ ರಾಜಕೀಯ ಮುನ್ನೆಲೆಗೆ ಬಂದವರು.

ಬಂಗಾಳ ಚುನಾವಣೆ 2026: ಬಿಜೆಪಿಗೆ ಅಭೂತಪೂರ್ವ ಬಹುಮತ

294 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಎರಡು-ತೃತೀಯಾಂಶ ಬಹುಮತವನ್ನು ಪಡೆದಿದೆ. 15 ವರ್ಷಗಳ ಕಾಲ ಆಡಳಿತ ನಡೆಸಿದ ಟಿಎಂಸಿ ಕೇವಲ 80 ಸ್ಥಾನಗಳಿಗೆ ಕುಸಿದಿದೆ. ಕಾಂಗ್ರೆಸ್ ಮತ್ತು ಅಜಿಪಿ ತಲಾ 2 ಸ್ಥಾನಗಳನ್ನು ಪಡೆದರೆ, ಸಿಪಿಐ(ಎಂ) ಮತ್ತು ಎಐಎಸ್ಎಫ್ ತಲಾ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿವೆ.
ಬಂಗಾಳದಲ್ಲಿ ಸೋನಾರ್ ಬಾಂಗ್ಲಾ ನಿರ್ಮಿಸುವ ಬಿಜೆಪಿಯ ಕನಸಿಗೆ ಈಗ ಸುವೇಂದು ಅಧಿಕಾರಿ ಅವರ ರೂಪದಲ್ಲಿ ಹೊಸ ಸಾರಥಿ ಸಿಕ್ಕಿದ್ದಾರೆ,(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net