ಅಸ್ಸಾಂನಲ್ಲಿ ಹಿಮಂತ ಬಿಸ್ವ ಶರ್ಮಾ ಅವರು ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ತಂದು ಸಂಚಲನ ಸೃಷ್ಟಿಸುತ್ತಿದ್ದರೆ, ಇತ್ತ ಬಂಗಾಳದಲ್ಲಿ ಸುವೇಂದು ಅಧಿಕಾರಿ ಸರ್ಕಾರ ಮದರಸಾಗಳ ಮೇಲೆ ಹಿಡಿತ ಸಾಧಿಸಲು ಮುಂದಾಗಿದೆ. ಹುಮಾಯೂನ್ ಕಬೀರ್ ಅವರ ಈ ಸವಾಲು ಬಂಗಾಳದ ಬೀದಿಗಳಲ್ಲಿ ಮತ್ತೊಂದು ಸುತ್ತಿನ ಕೋಮು ಮತ್ತು ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ,(ಏಜೆನ್ಸೀಸ್).