ಇಂಡಿಗೋ ವಿಮಾನಯಾನ ಸಂಸ್ಥೆಯಿಂದಾದ ಬಿಕ್ಕಟ್ಟಿನಿಂದ ಎಚ್ಚೆತ್ತುಕೊಂಡಿರುವ ಕೇಂದ್ರ ವಿಮಾನಯಾನ ಸಚಿವಾಲಯ, ದೇಶದ ಎರಡೇ ವಿಮಾನಯಾನ ಸಂಸ್ಥೆಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ಹೊಸ ವಿಮಾನಯಾನ ಸಂಸ್ಥೆಗಳಿಗೆ ಭಾರತೀಯ ವಾಯುಯಾನ ಮಾರುಕಟ್ಟೆಗೆ ಪ್ರವೇಶಿಸಲು ಅನುವು ಮಾಡಿಕೊಟ್ಟಿದ್ದು, ಮೂರು ಹೊಸ ಏರ್ಲೈನ್ಸ್ಗಳಿಗೆ ಎನ್ಓಸಿ ನೀಡಿದೆ. ಶಂಖ್ ಏರ್, ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್‌ಪ್ರೆಸ್ ಸಂಸ್ಥೆಗಳು ಎನ್ಓಸಿ ಪಡೆದಿದ್ದು, ಈ ವರ್ಷ ಹಾರಾಟ ಆರಂಭಿಸುವ ಸಾಧ್ಯತೆ ಇದೆ.